ಜನವರಿ ಮೊದಲ ವಾರದಲ್ಲಿ ಉಗ್ರರರ ದಾಳಿಗೆ ಹುತಾತ್ಮರಾದ ಲೆಫ್ಟಿನೆಂಟ್‌ ಕರ್ನಲ್‌ ನಿರಂಜನ್‌ಕುಮಾರ್‌ ಅವರ ಹೆಸರನ್ನು ವಿದ್ಯಾರಣ್ಯಪುರದವರೆಗಿನ ದೊಡ್ಡ ಬೊಮ್ಮಸಂದ್ರ ಮುಖ್ಯ ರಸ್ತೆಗೆ ನಾಮಕರಣ ಮಾಡಲು ಬಿಬಿಎಂಪಿಯು ಕಳೆದ ತಿಂಗಳು ಸ್ವಯಂ ಪ್ರೇರಿತವಾಗಿ ನಿರ್ಧಾರ ಮಾಡಿತ್ತು. ಈ ನಡುವೆ ನಿರಂಜನ್‌ಕುಮಾರ್‌ ಹೆಸರಿಡಲು ಮುಂದಾಗಿರುವ ರಸ್ತೆಗೆ ಈ ಮೊದಲೇ ‘ಪೇಟೆ ಸಿದ್ದಪ್ಪ ತಿರುವು' ಎಂಬ ಹೆಸರು ಇರುವುದು ತಡವಾಗಿ ಬೆಳಕಿಗೆ ಬಂದಿದೆ.
ಬೆಂಗಳೂರು (ಮೇ.23): ದೊಡ್ಡಬೊಮ್ಮಸಂದ್ರ ಮುಖ್ಯರಸ್ತೆಗೆ ಪಠಾಣ್ಕೋಟ್ ಉಗ್ರರ ದಾಳಿಯಲ್ಲಿ ಹುತಾತ್ಮರಾದ ಲೆಫ್ಟಿನೆಂಟ್ ಕರ್ನಲ್ ನಿರಂಜನ್ಕುಮಾರ್ ಹೆಸರು ನಾಮಕರಣ ಮಾಡುವುದಾಗಿ ಹೇಳಿದ್ದ ಬಿಬಿಎಂಪಿ ಇದೀಗ ಉಲ್ಟಾಹೊಡೆದಿದ್ದು ಬೇರೆ ಅಂಡರ್ಪಾಸ್ಗೆ ಅವರ ಹೆಸರು ನಾಮಕರಣ ಮಾಡುವುದಾಗಿ ಹೇಳಿದ್ದು, ತೀವ್ರ ವಿವಾದಕ್ಕೆ ಕಾರಣವಾಗಿದೆ.
ಜನವರಿ ಮೊದಲ ವಾರದಲ್ಲಿ ಉಗ್ರರರ ದಾಳಿಗೆ ಹುತಾತ್ಮರಾದ ಲೆಫ್ಟಿನೆಂಟ್ ಕರ್ನಲ್ ನಿರಂಜನ್ಕುಮಾರ್ ಅವರ ಹೆಸರನ್ನು ವಿದ್ಯಾರಣ್ಯಪುರದವರೆಗಿನ ದೊಡ್ಡ ಬೊಮ್ಮಸಂದ್ರ ಮುಖ್ಯ ರಸ್ತೆಗೆ ನಾಮಕರಣ ಮಾಡಲು ಬಿಬಿಎಂಪಿಯು ಕಳೆದ ತಿಂಗಳು ಸ್ವಯಂ ಪ್ರೇರಿತವಾಗಿ ನಿರ್ಧಾರ ಮಾಡಿತ್ತು. ಈ ನಡುವೆ ನಿರಂಜನ್ಕುಮಾರ್ ಹೆಸರಿಡಲು ಮುಂದಾಗಿರುವ ರಸ್ತೆಗೆ ಈ ಮೊದಲೇ ‘ಪೇಟೆ ಸಿದ್ದಪ್ಪ ತಿರುವು' ಎಂಬ ಹೆಸರು ಇರುವುದು ತಡವಾಗಿ ಬೆಳಕಿಗೆ ಬಂದಿದೆ. ಸ್ವಾತಂತ್ರ್ಯ ಹೋರಾಟಗಾರರೂ ಹಾಗೂ ಆ ರಸ್ತೆಗಾಗಿ ಉಚಿತವಾಗಿ ಭೂಮಿ ದಾನ ಮಾಡಿದ ಪೇಟೆ ಸಿದ್ದಪ್ಪ ಅವರ ಹೆಸರಿಗೆ ಬದಲಿಗೆ ನಿರಂಜನ್ ಅವರ ಹೆಸರಿಡುತ್ತಿರುವುದನ್ನು ಸಿದ್ದಪ್ಪ ಪುತ್ರ ಖಂಡಿಸಿದ್ದಾರೆ.
ಈ ಬಗ್ಗೆ ಸಚಿವ ಕೃಷ್ಣ ಬೈರೇಗೌಡ ಅವರಿಗೆ ಪತ್ರ ಬರೆದಿರುವ ಸಿದ್ದಪ್ಪ ಪುತ್ರ ನಾಗರಾಜ್, ಸ್ವಾತಂತ್ರ್ಯ ಹೋರಾಟಗಾರರ ಹೆಸರು ಬದಲಿಸುವುದನ್ನು ವಿರೋಧಿಸಿದ್ದಾರೆ. ಈ ಮನವಿ ಪತ್ರದ ಆಧಾರದ ಮೇಲೆ ಕೃಷ್ಣ ಬೈರೇಗೌಡರು ಮೇಯರ್ ಜಿ. ಪದ್ಮಾವತಿಗೆ ಪತ್ರ ಬರೆದಿದ್ದು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮೇಯರ್ ಜಿ. ಪದ್ಮಾವತಿ ಅವರು, ಲೆಫ್ಟೆನೆಂಟ್ ಕರ್ನಲ್ ನಿರಂಜನ್ಕುಮಾರ್ ಅವರ ಹೆಸರನ್ನು ಡಾ. ರಾಜ್ಕುಮಾರ್ ರಸ್ತೆಯಲ್ಲಿ ನೂತನವಾಗಿ ನಿರ್ಮಿಸುತ್ತಿರುವ ಅಂಡರ್ಪಾಸ್ ಹಾಗೂ ಹೆಬ್ಬಾಳ ಕೆಂಪಾಪುರದ ಪಾದಚಾರಿ ಮೇಲ್ಸೇತುವೆಗೆ ನಾಮಕರಣ ಮಾಡುವುದಾಗಿ ಹೇಳಿದ್ದಾರೆ.
ಬಿಬಿಎಂಪಿ ಆಡಳಿತವೇ ಸ್ವತಃ ಮುಂದೆ ಬಂದು ನಿರಂಜನ್ಕುಮಾರ್ ಹೆಸರು ಇಡುವುದಾಗಿ ಪ್ರಕಟಿಸಿತ್ತು. ಇದೀಗ ಬಿಬಿಎಂಪಿಯೇ ಬೇರೆ ಅಂಡರ್ಪಾಸ್ಗೆ ಹೆಸರು ಇಡುವುದಾಗಿ ಹೇಳಿ ನಿರಂಜನ್ಕುಮಾರ್ಗೆ ಅವಮಾನ ಮಾಡಿದೆ ಎಂದು ಅವರ ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪಾಲಿಕೆ ಅಧಿಕಾರಿಗಳ ಎಡವಟ್ಟು: ಮೇಯರ್
ಈಗಾಗಲೇ
