ಬೆಂಗಳೂರು[ಡಿ.06]: ಪಕ್ಷೇತರರ ಅಭ್ಯರ್ಥಿಯಾಗಿ ಬಿಬಿಎಂಪಿ ವ್ಯಾಪ್ತಿಯ ಸಘಾಯ್‌ಪುರ ವಾರ್ಡ್‌ನಿಂದ ಗೆಲುವು ಸಾಧಿಸಿದ್ದ ಏಳುಮಲೈ ನಿಧನರಾಗಿದ್ದಾರೆ.

ಹೃದಯಾಘಾತದಿಂದ ಕಳೆದ 20 ದಿನಗಳಿಂದ ವಿಕ್ರಮ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಏಳು ಮಲೈ ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ ಸುಮಾರು 1:30 ವೇಳೆಗೆ ಕೊನೆಯುಸಿರೆಳೆದಿದ್ದಾರೆ.

ಬಿಬಿಎಂಪಿ ಸಮಾಜ ಕಲ್ಯಾಣ ಸ್ಥಾಯಿ ಸಮಿತಿ ಅಧ್ಯಕ್ಷರಾಗಿದ್ದ ಏಳು ಮಲೈ ಸಮಾಜಿಕ ಕಳಕಳಿ ಹೊಂದಿದ್ದ ಕಾರ್ಪೋರೇಟರ್ ಆಗಿದ್ದರು. ಅಲ್ಲದೇ ತಮ್ಮ ಸಮಾಜಮುಖಿ ಕಾರ್ಯಗಳಿಂದ ಜನ ಮನ್ನಣೆಯನ್ನೂ ಗಳಿಸಿದ್ದರು.