ಮಾನವೀಯತೆ ಮೆರೆದ ಬಿಬಿಎಂಪಿ ಸ್ಥಾಯಿ ಸಮಿತಿ ಅಧ್ಯಕ್ಷ

First Published 26, Jun 2018, 2:17 PM IST
BBMP standing committee president Mahadev helps to hospitalized accident victim
Highlights

* ರಸ್ತೆಯಲ್ಲಿ ಬಿದ್ದು ಒದ್ದಾಡುತ್ತಿದ್ದ ಅಪರಿಚಿತ ವ್ಯಕ್ತಿಗೆ ಬಿಬಿಎಂಪಿ ಸ್ಥಾಯಿ ಸಮಿತಿ ಅಧ್ಯಕ್ಷ ಮಹದೇವ್ ಸಹಾಯ

* ಹೆಚ್ಚಿನ ಚಿಕಿತ್ಸೆಗೆ ಕೆಸಿ ಜನರಲ್ ಆಸ್ಪತ್ರೆಗೆ ರವಾನೆ 

*ಮಹದೇವ್ ಕಾರ್ಯಕ್ಕೆ ಸಾರ್ವಜನಿಕ ಮೆಚ್ಚುಗೆ 

 

 

 

 

ಬೆಂಗಳೂರು (ಜೂ. 26): ರಸ್ತೆಯಲ್ಲಿ ಬಿದ್ದು ಒದ್ದಾಡುತ್ತಿದ್ದ ಅಪರಿಚಿತ ವ್ಯಕ್ತಿಯನ್ನು ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದಿದ್ದಾರೆ ಬಿಬಿಎಂಪಿ ಸ್ಥಾಯಿ ಸಮಿತಿ ಅಧ್ಯಕ್ಷ ಮಹದೇವ್. ಯಶವಂತಪುರದ ಮಾರಪ್ಪನಪಾಳ್ಯ ವಾರ್ಡ್ ರಸ್ತೆಯಲ್ಲಿ ಬಿದ್ದಿದ್ದ ವ್ಯಕ್ತಿಗೆ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗೆ ಕೆಸಿ ಜನರಲ್ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. 

ಅಪರಿಚಿತ ವ್ಯಕ್ತಿಯ ಸಂಬಂಧಿಗಳು ಯಾರಾದರು ಇದ್ದಲ್ಲಿ ನೋಡಿಕೊಳ್ಳುವಂತೆ ವಿನಂತಿಸಿಕೊಂಡಿದ್ದಾರೆ. ಮಹದೇವ್’ರ ಕಾರ್ಯಕ್ಕೆ ಸಾರ್ವಜನಿಕ ಮೆಚ್ಚುಗೆ ವ್ಯಕ್ತವಾಗಿದೆ. 

loader