ಮುಂದಿನ ತಿಂಗಳು ನಡೆಯಲಿರುವ ಐಸಿಸಿ ಚಾಂಪಿಯನ್ ಟ್ರೋಫಿ-2017 ನಲ್ಲಿ ಟೀಮ್ ಇಂಡಿಯಾ ಭಾಗವಹಿಸಲಿದೆ ಎಂದು ಬಿಸಿಸಿಐ ಅಧಿಕೃತವಾಗಿ ಹೇಳಿದೆ. 

ನವದೆಹಲಿ (ಮೇ.07): ಮುಂದಿನ ತಿಂಗಳು ನಡೆಯಲಿರುವ ಐಸಿಸಿ ಚಾಂಪಿಯನ್ ಟ್ರೋಫಿ-2017 ನಲ್ಲಿ ಟೀಮ್ ಇಂಡಿಯಾ ಭಾಗವಹಿಸಲಿದೆ ಎಂದು ಬಿಸಿಸಿಐ ಅಧಿಕೃತವಾಗಿ ಹೇಳಿದೆ.

ಬಿಸಿಸಿಐ ನಡೆಸಿದ ವಿಶೇಷ ಸಭೆಯಲ್ಲಿ ಅವಿರೋಧವಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ನಾಳೆ ಆಲ್ ಇಂಡಿಯಾ ಸೀನಿಯರ್ ಸೆಲೆಕ್ಷನ್ ಸಭೆ ನಡೆಯಲಿದ್ದು, ತಂಡದ ಸದಸ್ಯರನ್ನು ಆಯ್ಕೆ ಮಾಡಲಿದ್ದಾರೆ.

ಮುಂದಿನ ತಿಂಗಳು ನಡೆಯಲಿರುವ ಐಸಿಸಿ ಚಾಂಪಿಯನ್’ಶಿಪ್’ನಲ್ಲಿ ಟೀಂ ಇಂಡಿಯಾ ಭಾಗವಹಿಸಲಿದೆ. ಐಸಿಸಿ ವಿರುದ್ಧ ಯಾವುದೇ ಕಾನೂನಿನ ನೆರವನ್ನು ಪಡೆಯಲಿಲ್ಲ. ಅಮಿತಾಬ್ ಚೌಧರಿ ಹಾಗೂ ಸಿಇಒ ರಾಹುಲ್ ಜೋಹ್ರಿ ಐಸಿಸಿ ಜೊತೆ ಮಾತುಕತೆ ನಡೆಸಲಿದ್ದಾರೆ ಎಂದು ಹಿರಿಯ ಅಧಿಕಾರಿಗಳು ಹೇಳಿದ್ದಾರೆ.