ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಶುಕ್ರವಾರ ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್ ಅವರನ್ನು ತೆಲಂಗಾಣದ ನಿವಾಸದಲ್ಲಿ ಭೇಟಿ ಮಾಡಿದ್ದಾರೆ. ಬಿಜೆಪಿ ಸಂಪರ್ಕ ಅಭಿಯಾನದ ಹಿನ್ನೆಲೆಯಲ್ಲಿ ಸೈನಾ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.
ಹೈದ್ರಾಬಾದ್ : ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಶುಕ್ರವಾರ ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್ ಅವರನ್ನು ಭೇಟಿ ಮಾಡಿದ್ದಾರೆ. ಬಿಜೆಪಿ ಸಂಪರ್ಕ ಅಭಿಯಾನದ ಹಿನ್ನೆಲೆಯಲ್ಲಿ ಸೈನಾ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.
ಕಳೆದ ನಾಲ್ಕು ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರದ ವಿವಿಧ ಅಭಿವೃದ್ಧಿ ಕಾರ್ಯಗಳ ಬಗ್ಗೆ ತಿಳಿಸುವ ಸಂಪರ್ಕ ಅಭಿಯಾನದ ನಿಟ್ಟಿನಲ್ಲಿ ಹೆಚ್ಚೆಚ್ಚು ಸಾಧನೆ ಮಾಡಿದ ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿರುವುದು ಹೆಚ್ಚು ಸಂತೋಷವನ್ನುಂಟು ಮಾಡಿದೆ ಎಂದು ಅಮಿತ್ ಶಾ ಅವರು ಟ್ವೀಟ್ ಮಾಡಿದ್ದಾರೆ.
ಈ ಬಗ್ಗೆ ಸೈನಾ ಅವರೂ ಕೂಡ ಟ್ವೀಟ್ ಮಾಡಿದ್ದು ನಿಮ್ಮ ಸ್ಫೂರ್ತಿದಾಯಕ ಮಾತುಗಳಿಗೆ ಧನ್ಯವಾದ ಎಂದು ಹೇಳಿದ್ದಾರೆ. ಅಲ್ಲದೇ ಬಿಜೆಪಿ ಸರ್ಕಾದ ಆಡಳಿತದ ಬಗ್ಗೆಯೂ ಕೂಡ ತಮ್ಮ ಟ್ವೀಟಲ್ಲಿ ಉಲ್ಲೇಖ ಮಾಡಿದ್ದಾರೆ. ಅಲ್ಲದೇ ಒಂದು ದಿನ ತೆಲಂಗಾಣದಲ್ಲಿ ಒಂದು ದಿನ ಪ್ರವಾಸ ಮಾಡಿದ ಅಮಿತ್ ಶಾ ಲೋಕಸಭಾ ಚುನಾವಣೆ ತಯಾರಿಯ ಬಗ್ಗೆಯೂ ಕೂಡ ನಾಯಕರುಗಳೊಂದಿಗೆ ಚರ್ಚೆ ನಡೆಸಿದ್ದಾರೆ.
