ನಾಳೆ ಸುಪ್ರೀಂಕೋರ್ಟ್​ನಲ್ಲಿ ಕಾವೇರಿ ಅರ್ಜಿ ವಿಚಾರಣೆ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎಂ.ಕೃಷ್ಣಪ್ಪ ದೆಹಲಿಗೆ ತೆರಳಿದ್ದಾರೆ.

ಬೆಂಗಳೂರು (ಅ.17): ನಾಳೆ ಸುಪ್ರೀಂಕೋರ್ಟ್​ನಲ್ಲಿ ಕಾವೇರಿ ಅರ್ಜಿ ವಿಚಾರಣೆ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎಂ.ಕೃಷ್ಣಪ್ಪ ದೆಹಲಿಗೆ ತೆರಳಿದ್ದಾರೆ.

ನಾಳೆ ನಡೆಯುವ ಸುಪ್ರೀಂಕೋರ್ಟ್'ನ ಕಲಾಪದಲ್ಲಿ ಸಚಿವ ಎಂ.ಕೃಷ್ಣಪ್ಪ ಭಾಗಿಯಾಗಲಿದ್ದಾರೆ.ನಾಳೆ ಸುಪ್ರೀಂ ಕೋರ್ಟಿನಲ್ಲಿ ಕಾವೇರಿ ನದಿ ನೀರು ಹಂಚಿಕೆಗೆ ಸಂಬಂಧಿಸಿದ ವಿಶೇಷ ಮೇಲ್ಮನವಿ ಅರ್ಜಿ ವಿಚಾರಣೆ ನಡೆಯುವ ಸಂದರ್ಭದಲ್ಲಿ ಕೋರ್ಟಿನಲ್ಲಿ ಸಚಿವರು ಹಾಜರಿರುತ್ತಾರೆ. ಬುಧವಾರ ಬೆಳಗ್ಗೆ ದೆಹಲಿಯಿಂದ ಬೆಂಗಳೂರಿಗೆ ಮರಳಲಿದ್ದಾರೆ ಎಂದು ಸಚಿವರ ಕಚೇರಿಯಿಂದ ಮಾಹಿತಿ ನೀಡಲಾಗಿದೆ.