ಚಾಮರಾಜನಗರ (ಸೆ.19): ಜಿಲ್ಲೆ ಅಭಿವೃದ್ದಿ ಆಗಬೇಕು. ಇಲ್ಲಿಗೆ ಬಂದರೆ ಅಧಿಕಾರ ಹೋಗುತ್ತೆ ಎಂಬ ಮೂಢನಂಬಿಕೆ ಇದೆ. ಜಿಲ್ಲೆಗೆ ಅಂಟಿರುವ ಕಳಂಕ ಹೋಗಬೇಕೆಂದೇ ನಾನು ಬಂದಿದ್ದೇನೆ ಎಂದು ಸಿಎಂ ಸಿದ್ಧರಾಮಯ್ಯ ಹೇಳಿದ್ದಾರೆ.
ಚಾಮರಾಜನಗರಕ್ಕೆ ಕಾಲಿಟ್ಟರೆ ಅಧಿಕಾರ ಕಳೆದುಕೊಳ್ಳುತ್ತಾರೆ ಎನ್ನುವ ನಂಬಿಕೆ ಹಿಂದಿನಿಂದಲೂ ಇದೆ. ಜಿಲ್ಲೆಯ ಅಭಿವೃದ್ಧಿಯಾಗಬೇಕು. ಆ ಕಾರಣದಿಂದ ಜಿಲ್ಲೆಗೆ ಅನೇಕ ಬಾರಿ ಭೇಟಿ ನೀಡಿದ್ದೇನೆ. ಇನ್ನು ಒಂದೂವರೆ ವರ್ಷದ ಅಧಿಕಾರಾವಧಿಯಲ್ಲಿ ಇಲ್ಲಿಗೆ ಅನೇಕ ಬಾರಿ ಬರುತ್ತಿನಿ ಎಂದು ಸಿಎಂ ಹೇಳಿದ್ದಾರೆ.
ಚಾಮರಾಜನಗರ ಜನ ನನ್ನನ್ನು ಬಹಳ ಪ್ರೀತಿಯಿಂದ ಕಾಣುತ್ತಾರೆ. ಅಭಿನಂದಿಸುತ್ತಾರೆ. ಈಗಾಗಿ ಜಿಲ್ಲೆಯ ಜನರ ಋಣ ತೀರಿಸುವುದು ನನ್ನ ಕರ್ತವ್ಯ ಎಂದು ಚಾಮರಾಜನಗರದಲ್ಲಿ ವೈದ್ಯಕೀಯ ಕಾಲೇಜು ಉದ್ಘಾಟನಾ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
