ಬಹಿರ್ದೆಸೆಗೆ ಹೋಗಿದ್ದ ಮಹಿಳೆ ಮೇಲೆ ಕರಡಿ ದಾಳಿ; ಸಾವು

First Published 18, Jan 2018, 4:12 PM IST
Beer attack on women and died
Highlights

ಬಹಿರ್ದೆಸೆಗೆ ಹೋಗಿದ್ದ ಗರ್ಭಿಣಿ ಮೇಲೆ ಕರಡಿ ದಾಳಿ ಮಾಡಿ ಕೊಂದು ಹಾಕಿರುವ ಘಟನೆ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಚೌಕಸಂದ್ರ ಗ್ರಾಮದಲ್ಲಿ ನಡೆದಿದೆ.

ಬೆಂಗಳೂರು (ಜ.18): ಬಹಿರ್ದೆಸೆಗೆ ಹೋಗಿದ್ದ ಗರ್ಭಿಣಿ ಮೇಲೆ ಕರಡಿ ದಾಳಿ ಮಾಡಿ ಕೊಂದು ಹಾಕಿರುವ ಘಟನೆ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಚೌಕಸಂದ್ರ ಗ್ರಾಮದಲ್ಲಿ ನಡೆದಿದೆ.

ಚೌಕಸಂದ್ರ ಗ್ರಾಮದ ನಿವಾಸಿ ಸುಮಭಾಯಿ ಮೃತ ದುರ್ದೈವಿ. ಇಂದು ಬೆಳಿಗ್ಗೆ ಸುಮಾರು 5  ಗಂಟೆಯ ವೇಳೆ ಬಹಿರ್ದೆಸೆಗೆ ಸುಮಾಭಾಯಿ ಮನೆಯ ಹಿಂಬದಿ ಹೋಗಿದ್ದರು.  ಈ ವೇಳೆ ಕರಡಿ ದಾಳಿ ನಡೆಸಿದ್ದು ಕುತ್ತಿಗೆ ಭಾಗದಲ್ಲಿ ಕಚ್ಚಿ, ಕೊರಳನ್ನು ಪರಚಿದೆ. ಪರಿಣಾಮ ತೀವ್ರ ರಕ್ತ ಸ್ರಾಮದಿಂದ ಸುಮಾಭಾಯಿ ಸಾವನ್ನಪ್ಪಿದ್ದಾರೆ. ಗ್ರಾಮಸ್ಥರು ಚಿರತೆ ದಾಳಿಯಿಂದ ಸುಮಭಾಯಿ ಸಾವನ್ನಪ್ಪಿದ್ದಾಳೆ. ಕರಡಿ ಕುತ್ತಿಗೆ ಭಾಗದಲ್ಲಿ ಕಚ್ಚಿದೆ ಎಂದು ತಿಳಿಸಿದ್ದಾರೆ. ಇನ್ನೂ ಸ್ಥಳಕ್ಕೆ ಕನಕಪುರ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕರಡಿ ದಾಳಿಯಿಂದ ಆಗಿರುವ ಸಾವು ಎಂದು ಧೃಡಪಡಿಸಿದ್ದಾರೆ. ಕನಕಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

loader