ಕಾಂಗ್ರೆಸ್‌-ಜೆಡಿಎಸ್‌ ಸಮ್ಮಿಶ್ರ ಸರ್ಕಾರದ ಮೊದಲ ಬೆಳಗಾವಿ ಅಧಿವೇಶನ ಡಿಸೆಂಬರ್‌ ತಿಂಗಳ ಮೊದಲ ಅಥವಾ ಎರಡನೇ ವಾರದಲ್ಲಿ ನಡೆಸಲು ಸಚಿವ ಸಂಪುಟ ಸಭೆ ತೀರ್ಮಾನಿಸಿದೆ.

ಬೆಂಗಳೂರು : ಕಾಂಗ್ರೆಸ್‌-ಜೆಡಿಎಸ್‌ ಸಮ್ಮಿಶ್ರ ಸರ್ಕಾರದ ಮೊದಲ ಬೆಳಗಾವಿ ಅಧಿವೇಶನ ಡಿಸೆಂಬರ್‌ ತಿಂಗಳ ಮೊದಲ ಅಥವಾ ಎರಡನೇ ವಾರದಲ್ಲಿ ನಡೆಸಲು ಸಚಿವ ಸಂಪುಟ ಸಭೆ ತೀರ್ಮಾನಿಸಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನವನ್ನು ಡಿಸೆಂಬರ್‌ ತಿಂಗಳಲ್ಲಿ ನಡೆಸಲು ನಿರ್ಧರಿಸಲಾಗಿದ್ದು, ಮುಖ್ಯಮಂತ್ರಿಗಳು ಉನ್ನತಮಟ್ಟದ ಸಭೆಯೊಂದನ್ನು ನಡೆಸಿ ದಿನಾಂಕವನ್ನು ನಿಗದಿಗೊಳಿಸಲಿದ್ದಾರೆ ಎಂದು ಸಹಕಾರ ಸಚಿವ ಬಂಡೆಪ್ಪ ಕಾಶೆಂಪೂರ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ಬೆಳಗಾವಿಯಲ್ಲಿ 10 ದಿನಗಳ ಕಾಲ ಅಧಿವೇಶನ ನಡೆಸಲಾಗುವುದು. ಸುವರ್ಣಸೌಧದಲ್ಲಿ ಅಧಿವೇಶನ ನಡೆಸುವ ಸಂಬಂಧ ಸಿದ್ಧತೆ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಮುಖ್ಯಮಂತ್ರಿಗಳು ಅಧಿಕಾರಿಗಳ ಜತೆ ಚರ್ಚಿಸಿ ದಿನಾಂಕವನ್ನು ಅಂತಿಮಗೊಳಿಸಲಿದ್ದಾರೆ.

ಸಮ್ಮಿಶ್ರ ಸರ್ಕಾರದ ಮೊದಲ ಬೆಳಗಾವಿ ಅಧಿವೇಶನ ನಡೆಸಲು ಅಗತ್ಯ ತಯಾರಿ ನಡೆಸುವಂತೆ ತಿಳಿಸಲಾಗಿದೆ. ಪ್ರತಿವರ್ಷದಂತೆ ಕೈಗೊಳ್ಳಬೇಕಾದ ಕ್ರಮಗಳನ್ನು ಅದಷ್ಟುಬೇಗ ಕೈಗೊಳ್ಳಬೇಕು. ಅಂತಿಮ ಹಂತದಲ್ಲಿ ಬಾಕಿ ಕೆಲಸ ಉಳಿಸಿಕೊಳ್ಳದಂತೆ ಎಚ್ಚರಿಕೆ ವಹಿಸಲು ಸೂಚಿಸಲಾಗಿದೆ ಎಂದರು.