ಯುವಕರನ್ನು ಟಾರ್ಗೆಟ್ ಮಾಡಿ ಗಾಂಜಾ ಮಾರುತ್ತಿದ್ದ ಗ್ಯಾಂಗ್ ಅನ್ನು ಸಿಸಿಬಿ ಇನ್ಸ್ಪೆಕ್ಟರ್ ಬಿ.ಆರ್. ಗಡ್ಡೇಕರ ನೇತೃತ್ವದಲ್ಲಿ ಸಿಸಿಬಿ ಪೋಲೀಸರು ದಾಳಿ ನಡೆಸಿ ಅರೆಸ್ಟ್ ಮಾಡಿದ್ದಾರೆ.
ಬೆಳಗಾವಿ (ಏ.05): ಯುವಕರನ್ನು ಟಾರ್ಗೆಟ್ ಮಾಡಿ ಗಾಂಜಾ ಮಾರುತ್ತಿದ್ದ ಗ್ಯಾಂಗ್ ಅನ್ನು ಸಿಸಿಬಿ ಇನ್ಸ್ಪೆಕ್ಟರ್ ಬಿ.ಆರ್. ಗಡ್ಡೇಕರ ನೇತೃತ್ವದಲ್ಲಿ ಸಿಸಿಬಿ ಪೋಲೀಸರು ದಾಳಿ ನಡೆಸಿ ಅರೆಸ್ಟ್ ಮಾಡಿದ್ದಾರೆ.
ಆರೋಪಿಗಳಿಂದ 6 ಲಕ್ಷ ಮೌಲ್ಯದ ಗಾಂಜಾ, ಆಟೋ, ಬೈಕ್, ಎರಡು ಮೊಬೈಲ್ ಸೇರಿದಂತೆ ಒಟ್ಟು 6.93 ಸಾವಿರ ಮೌಲ್ಯದ ವಸ್ತು ವನ್ನು ಜಪ್ತಿ ಮಾಡಿಕೊಂಡಿದ್ದಾರೆ.
ಶಾಫೀನ ಸನದಿ (45), ಶಬ್ಬೀರ ಅತ್ತಾರ (45), ಸಂಜೀವಗೋಳ (32), ಹಾಗೂ ಹುಕ್ಕೇರಿ ತಾಲೂಕಿನ ಮಹಾದೇವ ಬಂಧಿತ ಆರೋಪಿಗಳು. ಬಾಗಲಕೋಟೆ ಜಿಲ್ಲೆಯ ಜಮಖಂಡಿ ಮೂಲದ ಸಿದ್ದಪ್ಪ ಭಜಂತ್ರಿ ಎಂಬಾತನಿಂದ ಆರೋಪಿಗಳು ಗಾಂಜಾ ತರುತ್ತಿದ್ದರು.
ಬೆಳಗಾವಿಯ ಎಪಿಎಂಸಿ ಮತ್ತು ಮಾಳಮಾರುತಿ ಠಾಣೆ ವ್ಯಾಪ್ತಿಯಲ್ಲಿ ಪ್ರತೇಕ ದಾಳಿ ನಡೆಸಿ ಆರೋಪಿಗಳ ಬಂಧಿಸಲಾಗಿದೆ. ಪೊಲೀಸ್ ಆಯುಕ್ತ ಕೃಷ್ಣಭಟ್ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.
