Asianet Suvarna News Asianet Suvarna News

ಕಾಂಗ್ರೆಸ್ ಶಾಸಕ ನಾಗೇಂದ್ರಗೆ ಹೃದಯಾಘಾತ

ಬಳ್ಳಾರಿ ಗ್ರಾಮಾಂತರ ಕಾಂಗ್ರೆಸ್ ಶಾಸಕ ನಾಗೇಂದ್ರ ಗಂಭೀರ ಹೃದಯಾಘಾತ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. 

Bellary Congress MLA Nagendra Admitted To Hospital
Author
Bengaluru, First Published Jul 15, 2019, 7:23 AM IST
  • Facebook
  • Twitter
  • Whatsapp

ಬೆಂಗಳೂರು [ಜು.15] :  ಬಳ್ಳಾರಿ ಗ್ರಾಮಾಂತರ ಕಾಂಗ್ರೆಸ್‌ ಶಾಸಕ ಬಿ. ನಾಗೇಂದ್ರ (48) ಅವರು ಗಂಭೀರ ಹೃದಯ ಸಮಸ್ಯೆಯಿಂದಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಭಾನುವಾರ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಹಾಗೂ ಸಚಿವ ಡಿ.ಕೆ.ಶಿವಕುಮಾರ್‌ ಅವರು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.

ಐದು ದಿನಗಳ ಹಿಂದೆ ಹೃದಯಾಘಾತದಿಂದಾಗಿ ಬಿ. ನಾಗೇಂದ್ರ ಅವರು ಬೆಂಗಳೂರಿನ ಹೆಬ್ಬಾಳದಲ್ಲಿರುವ ಆಸ್ಟರ್‌ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ವೇಳೆ ನಾಗೇಂದ್ರ ಅವರಿಗೆ ಶಸ್ತ್ರಚಿಕಿತ್ಸೆ ನಡೆದಿದ್ದು, ಪ್ರಸ್ತುತ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎಂದು ತಿಳಿದುಬಂದಿದೆ. ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರ ವಿಶ್ವಾಸಮತ ಯಾಚನೆ ಮಾಡುವ ವೇಳೆಗೆ ಅವರು ಲಭ್ಯವಿರುತ್ತಾರೆಯೇ ಅಥವಾ ಇಲ್ಲವೇ ಎಂಬ ಬಗ್ಗೆ ಅನುಮಾನ ಮುಂದುವರೆದಿದೆ.

ಭಾನುವಾರ ಬಿ. ನಾಗೇಂದ್ರ ಅವರ ಆರೋಗ್ಯ ವಿಚಾರಿಸುವ ವೇಳೆಯಲ್ಲೇ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರು ಬುಧವಾರ ನಡೆಯಬಹುದಾದ ವಿಶ್ವಾಸಮತ ಯಾಚನೆ ವೇಳೆ ಹಾಜರಾಗಲು ಮನವಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.

Follow Us:
Download App:
  • android
  • ios