ಪಾಕಿಸ್ತಾನ ಸೇನೆ ಪರವಾಗಿ ಪೋಸ್ಟ್ ಹಾಕಿದ ವ್ಯಕ್ತಿಯೋರ್ವನನ್ನು ಬಳ್ಳಾರಿ ಪೊಲೀಸರು ಬಂಧಿಸಿದ್ದಾರೆ.

ಹೂವಿನಹಡಗಲಿ: ಪಾಕಿಸ್ತಾನದ ಸೈನಿಕರನ್ನು ಬೆಂಬಲಿಸಿ ಫೇಸ್‌ಬುಕ್‌ನಲ್ಲಿ ಪೋಸ್ಟ್ ಹಾಕಿದ ಕಾರಣ ತಾಲೂಕಿನ ಹಿರೇಹಡಗಲಿ ಗ್ರಾಮದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಕೆ.ರಮೇಶ್ (19) ಬಂಧಿತ. ನಾನು ಪಾಕ್ ಸೇನೆ ಜತೆಗಿರುವೆ ಎಂದು ರಮೇಶ್ ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿದ್ದ. ಆದಕಾರಣ ದೇಶ ದ್ರೋಹದಡಿ ಹಿರೇಹಡಗಲಿ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಿಕೊಂಡು ಪೊಲೀಸರು ಬಂಧಿಸಿದ್ದಾರೆ.

ಈಗಾಗಲೇ ಉಗ್ರರ ದಾಳಿ ಬೆಂಬಲಿಸಿದ್ದ ಅನೇಕರನ್ನು ದೇಶದ ವಿವಿಧೆಡೆ ಬಂಧನಕ್ಕೆ ಒಳಪಡಿಸಲಾಗಿದೆ.