ಕಾಂಗ್ರೆಸ್’ನತ್ತ ಮುಖ ಮಾಡಿದ ಬೇಳೂರು ಗೋಪಾಲಕೃಷ್ಣ

First Published 21, Apr 2018, 8:17 AM IST
Belur Gopalakrishna May Join Congress
Highlights

ಬಿಜೆಪಿ ಟಿಕೆಟ್ ಸಿಗದೆ ಮುನಿಸಿಕೊಂಡಿರುವ ಮಾಜಿ ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಕಾಂಗ್ರೆಸ್‌ನತ್ತ ಮುಖ ಮಾಡಿದ್ದು, ಶನಿವಾರ ಬೆಂಗಳೂರಿನಲ್ಲಿ ಸಿಎಂರನ್ನು ಭೇಟಿಯಾಗಿ ಕಾಂಗ್ರೆಸ್ ಸೇರಲಿದ್ದಾರೆ ಎಂದು ಮೂಲಗಳು ತಿಳಿಸಿವೆ

ಶಿವಮೊಗ್ಗ: ಬಿಜೆಪಿ ಟಿಕೆಟ್ ಸಿಗದೆ ಮುನಿಸಿಕೊಂಡಿರುವ ಮಾಜಿ ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಕಾಂಗ್ರೆಸ್‌ನತ್ತ ಮುಖ ಮಾಡಿದ್ದು, ಶನಿವಾರ ಬೆಂಗಳೂರಿನಲ್ಲಿ ಸಿಎಂರನ್ನು ಭೇಟಿಯಾಗಿ ಕಾಂಗ್ರೆಸ್ ಸೇರಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸಾಗರದಿಂದ ಕಣಕ್ಕಿಳಿದಿರುವ ಹರತಾಳು ಹಾಲಪ್ಪ ಅವರನ್ನು ಸೋಲಿಸಲು ಪಣತೊಟ್ಟಿರುವ ಬೇಳೂರು ಅವರು ಈ ಹಿಂದೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಹೇಳಿದ್ದರು.

ಆದರೆ, ಈಗ ಕಾಂಗ್ರೆಸ್ ಅಭ್ಯರ್ಥಿ, ತಮ್ಮ ಸೋದರ ಮಾವ ಕಾಗೋಡು ತಿಮ್ಮಪ್ಪ ಅವರನ್ನು ಬೆಂಬಲಿಸಲು ನಿರ್ಧರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಬೇಳೂರು ಶುಕ್ರವಾರ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಲು ಮುಂದಾಗಿದ್ದರಾದರೂ, ಅದು ಸಾಧ್ಯವಾಗಿರಲಿಲ್ಲ.

ಈಗ ಶನಿವಾರ ಸಿಎಂ ಸಿದ್ದರಾಮಯ್ಯ ಬೇಳೂರು ಭೇಟಿಗೆ ದಿನಾಂಕ ನಿಗದಿಯಾಗಿದೆ ಎಂದು ಮೂಲಗಳು ತಿಳಿಸಿವೆ.

loader