ಶಿವಮೊಗ್ಗ[ಜು.05]: ಪುತ್ತೂರು ಖಾಸಗಿ ಕಾಲೇಜು ವಿದ್ಯಾರ್ಥಿನಿ ಮೇಲೆ ನಡೆದಿರುವ ಗ್ಯಾಂಗ್ ರೇಪ್ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಶಾಸಕ ಬೇಳೂರು ಗೋಪಾಲ ಕೃಷ್ಣ ಪ್ರತಿಕ್ರಿಯಿಸಿದ್ದಾರೆ. ಅನ್ಯ ಧರ್ಮೀಯರು ಮಾಡಿದ್ದರೆ ಇಡೀ ರಾಜ್ಯಕ್ಕೆ ಬೆಂಕಿ ಹಚ್ಚುತ್ತಿದ್ದರು. ಆದರೀಗ ಶೋಭಾ ಕರಂದ್ಲಾಜೆ ಯಾಕೆ ಸುಮ್ಮನಿದ್ದಾರೆ ಎಂದು ಕಿಡಿ ಕಾರಿದ್ದಾರೆ.

ಹೌದು ಕಳೆದೆರಡು ದಿನಗಳಿಂದ ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಸದ್ದು ಮಾಡುತ್ತಿರುವ ವಿದ್ಯಾರ್ಥಿನಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಭಾರೀ ಆಕ್ರೋಶ ವ್ಯಕ್ತವಾಗಿದೆ. ಪ್ರಕರಣ ಸಂಬಂಧ ಶಿವಮೊಗ್ಗದಲ್ಲಿ ಮಾಜಿ ಶಾಸಕ ಬೇಳೂರು ಗೋಪಾಲ ಕೃಷ್ಣ, ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ಕಿಡಿ ಕಾರಿದ್ದಾರೆ. 'ವಿದ್ಯಾರ್ಥಿನಿ ಅತ್ಯಾಚಾರ ಪ್ರಕರಣ ಅನ್ಯ ಧರ್ಮೀಯರು ಮಾಡಿದ್ದರೆ ಇಡೀ ರಾಜ್ಯಕ್ಕೆ ಬೆಂಕಿ ಹಚ್ಚುತ್ತಿದ್ದರು. ಪೆರೆಸ್ತಾ ಪ್ರಕರಣ ಈಗ ಎನಾಯ್ತು? ಶೋಭಾ ಕರಂದ್ಲಾಜೆ ಈಗ ಬಾಯಿ ಬಡ್ಕೊಳ್ಳಲ್ಲ ಯಾಕೆ?' ಎಂದು ಪ್ರಶ್ನಿಸಿದ್ದಾರೆ. 

ಪುತ್ತೂರು ಘಟನೆ ವಿಡಿಯೋ ವೈರಲ್ ಹಿಂದಿನ ಕಾರಣ ಬಹಿರಂಗ, ಮತ್ತೆ 8 ಜನರ ಬಂಧನ

ಇದೇ ವೇಳೆ ವಿಐಎಸ್ಎಲ್ ಕಾರ್ಖಾನೆ ಕುರಿತಾಗಿ ಪ್ರತಿಕ್ರಿಯಿಸಿದ ಬೇಳೂರು ’ಭದ್ರಾವತಿ ವಿಐಎಸ್ಎಲ್ ಕಾರ್ಖಾನೆಯ ಉಳಿವಿಗೆ ಪಕ್ಣಾತೀತ ಹೋರಾಟ ಅಗತ್ಯ. ಯಡಿಯೂರಪ್ಪ ಮತ್ತು ಅವರ ಮಕ್ಕಳು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು. ಸುಳ್ಳು ಹೇಳುವುದರಲ್ಲಿ ಪ್ರಶಸ್ತಿ ಕೊಡುವುದಾದರೆ ಪ್ರಥಮ, ದ್ವೀತಿಯ, ತೃತೀಯ ಮೂರು ಸ್ಥಾನ ಯಡಿಯೂರಪ್ಪ ಮತ್ತು ಅವರ ಮಕ್ಕಳಿಗೆ ಕೊಡಬೇಕು' ಎಂದು ವ್ಯಂಗ್ಯವಾಡಿದ್ದಾರೆ.

ಪುತ್ತೂರು ಗ್ಯಾಂಗ್‌ ರೇಪ್ ಪ್ರಕರಣ: ಐವರು ವಿದ್ಯಾರ್ಥಿಗಳು ಅರೆಸ್ಟ್

ಕೇಂದ್ರ ಬಜೆಟ್ ಕುರಿತಾಗಿ ಪ್ರತಿಕ್ರಿಯಿಸಿದ ಮಾಜಿ ಶಾಸಕ 'ಕೇಂದ್ರ ಬಜೆಟ್ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರು ಮನ್ ಕಿ ಬಾತ್ ನಲ್ಲಿ ಹೇಳಿದ್ದನ್ನು ಕಾರ್ಯ ರೂಪಕ್ಕೆ ತರುವ ನಿರೀಕ್ಷೆ ಇದೆ. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಉತ್ತಮ ಬಜೆಟ್ ಕೊಡಬಹುದು' ಎಂಬ ನಿರೀಕ್ಷೆ ವ್ಯಕ್ತಪಡಿಸಿದ್ದಾರೆ.