ಕಾಂಗ್ರೆಸ್'ನತ್ತ ಮುಖ ಮಾಡಿದ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ !

Beluru Gopalakrishna May Join Congress
Highlights

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಸ್ಪರ್ಧಿಸುವುದಕ್ಕೆ ಅವಕಾಶ ಸಲೀಸಾಗಿದೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಿಎಸ್ ವೈ ಪುತ್ರ ರಾಘವೇಂದ್ರ ವಿರುದ್ಧ ಕಾಂಗ್ರೆಸ್ ಗೆ ಪ್ರಬಲ ಅಭ್ಯರ್ಥಿಯಿರಲಿಲ್ಲ.

ಸಾಗರ ಕ್ಷೇತ್ರದಲ್ಲಿ ಮಾವನ ಕೈ ಬಲಪಡಿಸಲು ಮುಂದಾದ ಬೇಳೂರು ಹಳೇ ಮುನಿಸು ಬಿಟ್ಟು ಒಂದಾಗಲಿದ್ದಾರೆ  ಎನ್ನಲಾಗಿದೆ.  ಕಾಗೋಡು ತಿಮ್ಮಪ್ಪ ಅವರ ತಂಗಿ ಪುತ್ರ ಬೇಳೂರು ಗೋಪಾಲಕೃಷ್ಣ.

ಸಾಗರ ಕ್ಷೇತ್ರದಿಂದ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಬಿಜೆಪಿ ವಿರುದ್ಧ ಮುನಿಸಿಕೊಂಡಿದ್ದಾರೆ. ಬೇಳೂರು ಬದಲು ಹಾಲಪ್ಪಗೆ ಬಿಜೆಪಿ ಟಿಕೆಟ್ ನೀಡಿದೆ. ಒಂದು ಹಂತದಲ್ಲಿ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಯೋಚಿಸಿದ್ದರು.

ಇದೀಗ ಕಾಂಗ್ರೆಸ್ ನತ್ತ ಮುಖ ಮಾಡಿದ್ದಾರೆ. ಕಾಂಗ್ರೆಸ್ ಸೇರುವುದರಿಂದ ಕಾಗೋಡು ಮುಂದಿನ ಉತ್ತರಾಧಿಕಾರಿ ಆಗಬಹುದು.

 

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಸ್ಪರ್ಧಿಸುವುದಕ್ಕೆ ಅವಕಾಶ ಸಲೀಸಾಗಿದೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಿಎಸ್ ವೈ ಪುತ್ರ ರಾಘವೇಂದ್ರ ವಿರುದ್ಧ ಕಾಂಗ್ರೆಸ್ ಗೆ ಪ್ರಬಲ ಅಭ್ಯರ್ಥಿಯಿರಲಿಲ್ಲ.ಈಡಿಗ ಸಮುದಾಯದ ಬೇಳೂರು ಗೋಪಾಲಕೃಷ್ಣ ಕಾಂಗ್ರೆಸ್ ಸೇರಿದರೆ ಶಿವಮೊಗ್ಗ ಜಿಲ್ಲೆಯಲ್ಲಿ ಯಡಿಯೂರಪ್ಪ ಪುತ್ರ ರಾಘವೇಂದ್ರ ವಿರುದ್ಧ ಪ್ರಬಲ ಪೈಪೋಟಿ ನೀಡಬಹುದು. ಈಗಾಗಲೇ ಸಿಎಂ ಸಿದ್ದರಾಮಯ್ಯ ಜೊತೆ ಮಾತುಕತೆ ನಡೆಸಿದ್ದು, ಕಾಗೋಡು ತಿಮ್ಮಪ್ಪ ಕೂಡ ಮನವೊಲಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

loader