ಬೆಂಗಳೂರು(ಸೆ.28): ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ವರಕವಿ ದ. ರಾ. ಬೇಂದ್ರೆ ಅವರ ಪುತ್ರ ಡಾ. ವಾಮನದತ್ತಾತ್ರೇಯ ಬೇಂದ್ರೆ (81 ಬುಧವಾರ ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred


ವರಕವಿ ದ.ರಾ.ಬೇಂದ್ರೆ ಮತ್ತು ಲಕ್ಷ್ಮೀಬಾಯಿ ದಂಪತಿ ಪುತ್ರ, ಸಾಹಿತಿ ಡಾ. ವಾಮನ ಬೇಂದ್ರೆ ಹಾವೇರಿ ಜಿಲ್ಲೆಯ ರಾಣೆಬೆನ್ನೂರಿನಲ್ಲಿ ಜುಲೈ ೨೮, ೧೯೩೫ರಲ್ಲಿ ಜನಿಸಿದ್ದರು. ಸಾಹಿತ್ಯ ಮತ್ತು ಕಲೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು. 


ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ವಾಮನದತ್ತಾತ್ರೇಯ ಬೇಂದ್ರೆ ಬುಧವಾರ ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆ ಲೈಫ್ ಲೈನ್ ನಲ್ಲಿ ಮೃತರಾಗಿದ್ದಾರೆ. ಮೃತದೇಹವನ್ನು ಧಾರವಾಡದ ದ.ರಾ.ಬೇಂದ್ರ ನಿವಾಸದಲ್ಲಿ ಸಾರ್ವಜನಿಕ ದರ್ಶನಕ್ಕಿಡಲಾಗಿದೆ.