ಮಹಿಳಾ ಉದ್ಯೋಗಿಗಳಿಗೆ ಹೆಚ್ಚಿನ ವೇತನ ನೀಡುವ ನಗರಗಳಲ್ಲಿ ಬೆಂಗಳೂರು ಮೊದಲ ಸ್ಥಾನ ಪಡೆದುಕೊಂಡಿದೆ. ಬೆಂಗಳೂರಿನ ಬಳಿಕ ಪುಣೆ ಮತ್ತು ಮುಂಬೈ ಮಹಿಳೆಯರಿಗೆ ಹೆಚ್ಚಿನ ವೇತನ ನೀಡುತ್ತಿರುವ ನಗರಗಳಾಗಿವೆ ಎಂದು ಅಧ್ಯಯನ ವರದಿ ತಿಳಿಸಿದೆ.
ಬೆಂಗಳೂರಿನ ಬಳಿಕ ಪುಣೆ ಮತ್ತು ಮುಂಬೈ ಮಹಿಳೆಯರಿಗೆ ಹೆಚ್ಚಿನ ವೇತನ ನೀಡುತ್ತಿರುವ ನಗರಗಳಾಗಿವೆ ಎಂದು ಅಧ್ಯಯನ ವರದಿ ತಿಳಿಸಿದೆ.
ಟೀಮ್‌ಲೀಸ್ ನಡೆಸಿದ ಸಮೀಕ್ಷೆಯ ಪ್ರಕಾರ, ಬೆಂಗಳೂರಿನಲ್ಲಿ ಇತರ ನಗರಗಳಿಗಿಂತ ಮಹಿಳೆಯರಿಗೆ ಹೆಚ್ಚಿನ ವೇತನ ಮತ್ತು ಸೌಲಭ್ಯಗಳನ್ನು ನೀಡಲಾಗುತ್ತಿದೆ. ಭಾರತದ ಐಟಿ ಕೇಂದ್ರ ಎನಿಸಿಕೊಂಡಿರುವ ಬೆಂಗಳೂರಿನಲ್ಲಿ ಲಿಂಗ ತಾರತಮ್ಯವಿಲ್ಲದೇ ಮಹಿಳೆಯರಿಗೆ ಕಾರ್ಯನಿರ್ವಹಿಸುವುಕ್ಕೆ ಪೂರಕ ವಾತಾವರಣವಿದೆ.
