ಬೆಂಗಳೂರು [ಆ.15]:  ರಾಜ್ಯದಲ್ಲಿ ಸಂಕಷ್ಟಕ್ಕೆ ತುತ್ತಾಗಿರುವ ನೆರೆಸಂತ್ರಸ್ತರ ನೋವಿಗೆ ಸ್ಪಂದಿಸಿರುವ ಬೆಂಗಳೂರು ನಗರ ಪೊಲೀಸ್‌ ಆಯುಕ್ತ ಭಾಸ್ಕರ್‌ ರಾವ್‌ ಅವರು, ತಮ್ಮ ಒಂದು ತಿಂಗಳ ವೇತನವನ್ನು ಮುಖ್ಯಮಂತ್ರಿಗಳ ನೆರೆ ಸಂತ್ರಸ್ತರ ಪರಿಹಾರ ನಿಧಿಗೆ ನೀಡಿದ್ದಾರೆ. 

ಬುಧವಾರ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್‌ ಅವರನ್ನು ಭೇಟಿ ಮಾಡಿದ ಆಯುಕ್ತರು, ತಮ್ಮ ಒಂದು ತಿಂಗಳ ಸಂಬಳವಾದ .2,17,600 ಮೊತ್ತದ ಚೆಕ್‌ ಅನ್ನು ಹಸ್ತಾಂತರಿಸಿದರು. 

ಕರ್ನಾಟಕ ಪ್ರವಾಃದ ಹೆಚ್ಚಿನ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಈ ಹಿಂದೆ ಉತ್ತರ ವಲಯದ ಐಜಿಪಿಯಾಗಿ ಕೆಲಸ ನಿರ್ವಹಿಸಿದ್ದೆ. ಆ ವೇಳೆ ಉತ್ತರ ಕರ್ನಾಟಕದ ಜನರು ತೋರಿದ ಸಹಕಾರ ಮತ್ತು ಪ್ರೀತಿ ಅನನ್ಯವಾದದ್ದು. ಈಗ ಸಂಕಷ್ಟಕ್ಕೆ ಸಿಲುಕಿರುವ ಆ ಜನರಿಗೆ ಸಣ್ಣ ನೆರವು ನೀಡಿದ್ದೇನೆ ಎಂದು ಆಯುಕ್ತರು ತಿಳಿಸಿದ್ದಾರೆ.