ಬೆಂಗಳೂರಿನ ಅರಮನೆ ಮೈದಾನದಲ್ಲಿ ಕಾಂಗ್ರೆಸ್ ಜನಾಶೀರ್ವಾದ ಯಾತ್ರೆಯ ಸಮಾರೋಪ ಸಮಾರಂಭ ನಡೆಯುತ್ತಿದ್ದು, ಈ ವೇಳೆ ನಾಯಕರ ಬೃಹತ್ ಕಟೌಟ್ಗಳು ಧರೆಗುರುಳಿ ಭಾರೀ ಅನಾಹುತವೊಂದು ತಪ್ಪಿದೆ.
ಬೆಂಗಳೂರು : ಬೆಂಗಳೂರಿನ ಅರಮನೆ ಮೈದಾನದಲ್ಲಿ ಕಾಂಗ್ರೆಸ್ ಜನಾಶೀರ್ವಾದ ಯಾತ್ರೆಯ ಸಮಾರೋಪ ಸಮಾರಂಭ ನಡೆಯುತ್ತಿದ್ದು, ಈ ವೇಳೆ ನಾಯಕರ ಬೃಹತ್ ಕಟೌಟ್ಗಳು ಧರೆಗುರುಳಿ ಭಾರೀ ಅನಾಹುತವೊಂದು ತಪ್ಪಿದೆ.
ಸ್ಥಳದಲ್ಲಿ ಗಾಳಿಯ ರಭಸಕ್ಕೆ ಕಾಂಗ್ರೆಸ್ ನಾಯಕರ ಕಟೌಟ್ಗಳು ಮುರಿದು ಬಿದ್ದಿವೆ. ಇನ್ನೂ ಜನ ಸೇರದ ಹಿನ್ನೆಲೆ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ. ವೇದಿಕೆ ಪಕ್ಕದಲ್ಲೇ ನಿಲ್ಲಿಸಿದ್ದ 20 ಅಡಿ ಎತ್ತರದ ಕಟೌಟ್ಗಳು ಗಾಳಿಯಿಂದ ಮುರಿದು ಧರೆಗೆ ಉರುಳಿವೆ.
ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಜನಾಶೀರ್ವಾದ ಯಾತ್ರೆ ಸಮಾರೋಪ ಸಮಾರಂಭ ನಡೆಯುತ್ತಿದ್ದು, ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಪಾಲ್ಗೊಂಡಿದ್ದಾರೆ.
