ರೋಹಿಣಿ ವರ್ಗಾವಣೆ: ಸರ್ಕಾರ ನಿಲುವು ತಿಳಿಸುವುದು ಯಾವಾಗ?

Bengaluru: IAS officer, Rohini Sindhuri's appeal posted to June 26
Highlights

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವರ್ಗಾವಣೆ ಪ್ರಕರಣ ಇಂದು ಹೈಕೋರ್ಟ್‌ನಲ್ಲಿ ವಿಚಾರಣೆಗೆ ಬಂದಿತ್ತು. ಸರಕಾರದ ನಿಲುವು ತಿಳಿಸಲು ವಕೀಲರು ಕಾಲಾವಕಾಶ ಕೇಳಿದ ಹಿನ್ನೆಲೆಯಲ್ಲಿ ವಿಚಾರಣೆ ಮುಂದೂಡಲಾಗಿದೆ.

ಬೆಂಗಳೂರು [ಜೂ 20] ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವರ್ಗಾವಣೆ ಪ್ರಕರಣ ಇಂದು ಹೈಕೋರ್ಟ್‌ನಲ್ಲಿ ವಿಚಾರಣೆಗೆ ಬಂದಿತ್ತು.  ಸರಕಾರದ ನಿಲುವು ತಿಳಿಸುವಂತೆ ಈ ಮೊದಲೇ ಹೈಕೋರ್ಟ್ ಹೇಳಿತ್ತು.

ಇಂದು ನಿಲುವು ತಿಳಿಸಲು ಸರ್ಕಾರಿ ವಕೀಲರು ಕಾಲಾವಕಾಶ ಕೇಳಿದರು. ಈ ಹಿನ್ನೆಲೆಯಲ್ಲಿ ಅರ್ಜಿ ವಿಚಾರಣೆಯನ್ನು ಸೋಮವಾರ ಅಂದರೆ ಜೂನ್ 26ಕ್ಕೆ ಮುಂದೂಡಿದೆ.

2017ರ ಜು. 14ರಂದು ಹಾಸನ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದ ರೋಹಿಣಿ ಸಿಂಧೂರಿ ಅವರನ್ನು ಜನವರಿಯಲ್ಲಿ ವರ್ಗ ಮಾಡಲಾಗಿತ್ತು. ಈ ಆದೇಶ ಪ್ರಶ್ನಿಸಿ ಚುನಾವಣಾ ಆಯೋಗ ಬಳಿಕ ಕೇಂದ್ರ ಆಡಳಿತಾತ್ಮಕ ನ್ಯಾಯ ಮಂಡಳಿಗೆ ಈ ಹಿಂದೆ ಮೊರೆ ಹೋಗಿದ್ದರು. ಅಂತಿಮವಾಗಿ ರೋಹಿಣಿ ಹೈಕೋರ್ಟ್ ಮೊರೆ ಹೋಗಿದ್ದರು.

loader