ಬೆಂಗಳೂರು (ಮೇ.05): ತಮಿಳುನಾಡಿನ ವೆಲ್ಲೂರಿನಲ್ಲಿ ಬೆಳಗಿನ ಜಾವ ನಡೆದ ಅಪಘಾತದಲ್ಲಿ ಬೆಂಗಳೂರಿನ ರೂಪದರ್ಶಿ ರೇಖಾ ಸಿಂಧು ಸಾವನಪ್ಪಿದ್ದಾರೆ. ಬೆಂಗಳೂರಿನ ಬಾಣಸವಾಡಿ ನಿವಾಸಿಯಾಗಿದ್ದ ರೇಖಾ ಸಿಂಧು ಜಾಹೀರಾತು ಚಿತ್ರೀಕರಣಕ್ಕೆ ಚೆನ್ನೈಗೆ ಹೋಗುತ್ತಿದ್ದ ವೇಳೆ ಅಪಘಾತ ನಡೆದಿದೆ.ಸಿಂಧು ಪ್ರಯಾಣಿಸುತ್ತಿದ್ದ ಕಾರು ಡಿವೈಡರ್​ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಕಾರಿನಲ್ಲಿದ್ದ ಐವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.