ಅನಂತಕುಮಾರ್ ಅಂತಿಮ ದರ್ಶನ ಪಡಯಲು ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿಗೆ ಆಗಮಿಸಲಿದ್ದಾರೆ.

ಬೆಂಗಳೂರು, (ನ.12): ಅನಾರೋಗ್ಯದಿಂದ ಇಂದು [ಸೋಮವಾರ] ನಿಧನರಾದ ಕೇಂದ್ರ ಸಚಿವ ಅನಂತಕುಮಾರ್ ಅವರ ಅಂತಿಮ ದರ್ಶನ ಪಡೆಯಲು ಪ್ರಧಾನಿ ನರೇಂದ್ರ ಮೋದಿ ಇಂದು [ಸೋಮವಾರ] ಬೆಂಗಳೂರಿಗೆ ಆಗಮಿಸಲಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Live Updates: ಕೇಂದ್ರ ಸಚಿವ ಅನಂತ ಕುಮಾರ್ ಇನ್ನಿಲ್ಲ

ಇಂದು ರಾತ್ರಿ 7.30ಕ್ಕೆ ಪ್ರಧಾನಿ ಮೋದಿ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ಆಗಮಿಸಲಿದ್ದು, ಅನಂತಕುಮಾರ್ ಅವರ ಅಂತಿಮ ದರ್ಶನ ಪಡೆಯಲಿದ್ದಾರೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. 

ಈ ಮುಂಚೆ ನರೇಂದ್ರ ಮೋದಿ ಅವರು ನೇಳೆ [ಮಂಗಳವಾರ] ಬರುತ್ತಾರೆ ಎಂದು ಹೇಳಲಾಗಿತ್ತು. ಆದರೆ ಮೋದಿ ಅವರ ಪ್ರವಾಸ ವೇಳೆಪಟ್ಟಿಯಲ್ಲಿ ಪರಿಷ್ಕೃತವಾಗಿದ್ದು, ಇಂದು ಬೆಂಗಳೂರಿಗೆ ಆಗಮಿಸಲಿದ್ದಾರೆ. 

ಮೋದಿ ಮಾತ್ರವಲ್ಲದೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ರಾಜನಾಥ್ ಸಿಂಗ್ ಹಾಗೂ ಬಿಜೆಪಿಯ ಹಿರಿಯ ನಾಯಕ ಎಲ್.ಕೆ.ಅಡ್ವಾಣಿ ಅವರು ಕೂಡ ಅನಂತಕುಮಾರ್ ಅವರ ಅಂತಿಮ ದರ್ಶನ ಪಡೆಯಲು ಬೆಂಗಳೂರಿಗೆ ಆಗಮಿಸಲಿದ್ದಾರೆ.

 ಇಂದು ಇಡಿ ದಿನ ಅನಂತಕುಮಾರ್ ಪಾರ್ಥಿವ ಶರೀರವನ್ನ ಬಸವನಗುಡಿಯಲ್ಲಿರುವ ಅವರ ನಿವಾಸದಲ್ಲಿ ಇರಿಸಲು ನಿರ್ಧರಿಸಲಾಗಿದೆ. ಹಿನ್ನಲೆಯಲ್ಲಿ ಈ ಎಲ್ಲಾ ನಾಯಕರು ಬಸವನಗುಡಿಗೆ ತೆರಳಿ ಅನಂತಕುಮಾರ್ ಅವರ ಅಂತಿಮ ದರ್ಶನ ಪಡೆಯಲಿದ್ದಾರೆ.

ಬಳಿಕ ಪುನಃ ಸೋಮವಾರ ರಾತ್ರಿಯೇ ನವದೆಹಲಿಗೆ ಪ್ರಯಾಣ ಬೆಳಸಲಿದ್ದಾರೆ. ನಾಳೆ [ಮಂಗಳವಾರ] ಮಧ್ಯಾಹ್ನ 1ಗಂಟೆಗೆ ಚಾಮರಾಜಪೇಟೆಯ ಚಿತಗಾರದಲ್ಲಿ ಅನಂತಕುಮಾರ್ ಅವರ ಅಂತ್ಯಕ್ರಿಯೆ ನಡೆಯಲಿದೆ.