ಕೊತ್ತನೂರು ಪೊಲೀಸರು ಕಾರ್ಯಾಚರಣೆ ನಡೆಸಿ ಕಾರ್ತಿಕ್ ಅಲಿಯಾಸ್ ಎಸ್ಕೇಪ್ ಕಾರ್ತಿಕ್ ಎನ್ನುವ ಕಳ್ಳನನ್ನು ಬಂಧಿಸಿದ್ದಾರೆ. ಈತನ ವಿರುದ್ಧ 70ಕ್ಕೂ ಅಧಿಕ ಪ್ರಕರಣಗಳು ದಾಖಲಾಗಿದ್ದವು.
ಬೆಂಗಳೂರು (ಜ.06): ಕೊತ್ತನೂರು ಪೊಲೀಸರು ಕಾರ್ಯಾಚರಣೆ ನಡೆಸಿ ಕಾರ್ತಿಕ್ ಅಲಿಯಾಸ್ ಎಸ್ಕೇಪ್ ಕಾರ್ತಿಕ್ ಎನ್ನುವ ಕಳ್ಳನನ್ನು ಬಂಧಿಸಿದ್ದಾರೆ. ಈತನ ವಿರುದ್ಧ 70ಕ್ಕೂ ಅಧಿಕ ಪ್ರಕರಣಗಳು ದಾಖಲಾಗಿದ್ದವು.
ಈತನನ್ನು ಬಂಧಿಸಿದ ಪೊಲೀಸರು ಸುಮಾರು 30 ಲಕ್ಷ ಮೌಲ್ಯದ ಚಿನ್ನಾಭರಣ, ಮೂರು ಮೊಬೈಲ್ ವಶಕ್ಕೆ ಪಡೆದಿದ್ದಾರೆ. ಈತನ ವಿರುದ್ಧ 26ಕ್ಕೂ ಅಧಿಕ ಠಾಣೆಗಳಲ್ಲಿ ಪ್ರಕರಣ ದಾಖಲಾಗಿವೆ.
2007ರಲ್ಲಿ ಈತ ಪರಪ್ಪನ ಅಗ್ರಹಾರ ಜೈಲಿನಿಂದ ಎಸ್ಕೇಪ್ ಆಗಿದ್ದ. 2005ರಲ್ಲಿ ಈತನಿಗೆ 16 ವರ್ಷ ಇರುವಾಗಲೇ ಮೋಜು ಮಸ್ತಿಗಾಗಿ ಕಳ್ಳತನ ಆರಂಭಿಸಿದ್ದ. ಮೊದಲ ಕಳ್ಳತನದಲ್ಲೇ 10 ಲಕ್ಷ ಹಣವನ್ನು ಕದ್ದಿದ್ದ ಎನ್ನಲಾಗಿದೆ.
