ಜಮ್ಮುವಿನ ಅಂತಾರಾಷ್ಟ್ರೀಯ ಗಡಿ ಹೀರಾನಗರದಲ್ಲಿ ಅಕ್ಟೋಬರ್ 20ರ ನುಸುಕಿನಲ್ಲಿ ನಡೆದ ಪಾಕಿಸ್ತಾನ ಸೈನಿಕರ ಗುಂಡಿನ ದಾಳಿಯಲ್ಲಿ ಗುರ್ನಾಮ್ ಸಿಂಗ್ ಅವರ ತಲೆಗೆ ಗುಂಡೇಟು ಬಿದ್ದಿತ್ತು. ತೀವ್ರವಾಗಿ ಅಸ್ವಸ್ಥಗೊಂಡಿದ್ದ ಗುರ್ನಾಮ್ ಸಿಂಗ್ ಅವರನ್ನು ಚಿಕಿತ್ಸೆಗಾಗಿ ವಿದೇಶಿ ವೈದ್ಯರ ತಂಡವನ್ನು ಕರೆಸಿಕೊಳ್ಳುವ ಚಿಂತೆನೆ ನಡೆಸಲಾಗುತ್ತಿತ್ತು.
ಜಮ್ಮು(ಅ.23): ಗಡಿಯಲ್ಲಿ ಪಾಕಿಸ್ತಾನ ಸೈನಿಕರ ಅಪ್ರಚೋದಿತ ಗುಂಡಿನ ದಾಳಿಯಲ್ಲಿ ಹುತಾತ್ಮನಾದ ಯೋಧ ಗುರ್ನಾಮ್ ಸಿಂಗ್’ಗೆ ಸರಿಯಾದ ವೈದ್ಯಕೀಯ ಸೌಲಭ್ಯ ಸಿಕ್ಕಿರುತ್ತಿದ್ದರೆ ಆತ ಬದುಕಿರುತ್ತಿದ್ದ ಎಂದು ಕುಟುಂಬಸ್ಥರು ಹೇಳಿದ್ದಾರೆ.
ತೀವ್ರವಾಗಿ ಗಾಯಗೊಂಡಿದ್ದ ಗುರ್ನಾಮ್ ಸಿಂಗ್ ಜಮ್ಮುವಿನ ಸರ್ಕಾರಿ ವೈದ್ಯಕೀಯ ಕಾಲೇಜು ಹಾಗೂ ಅಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೇ ಅವರು ಕೊನೆಯುಸಿರೆಳೆದಿದ್ದಾರೆ.
ಬಿಎಸ್’ಎಫ್ ಯೋಧರಿಗೆ ಪ್ರತ್ಯೇಕ ಆಸ್ಪತ್ರೆ ಇರುತ್ತಿದ್ದರೆ, ಹಾಗೂ ಸೂಕ್ತವಾದ ಚಿಕಿತ್ಸೆ ಸಿಕ್ಕಿರುತ್ತಿದ್ದರೆ ಆತ ಬದುಕುಳಿಯುತ್ತಿದ್ದ ಎಂದು ಆತನ ತಂದೆ ಕುಲ್ಬೀರ್ ಸಿಂಗ್ ಹೇಳಿರುವುದಾಗಿ ಏಎನ್ಐ ವರದಿ ಮಾಡಿದೆ.
ಇನ್ಮುಂದೆ ಇಂತಹ ಘಟನೆ ಮರುಕಳಿಸದಿರಲು, ಬಿಎಸ್’ಎಫ್ ಯೋಧರಿಗೆ ಪ್ರತ್ಯೇಕ ಆಸ್ಪತ್ರೆ ಕಟ್ಟಿಸುವಂತೆ ಅವರು ಪ್ರಧಾನಿ ನರೇಂದ್ರ ಮೋದಿಗೆ ಮನವಿ ಮಾಡಿದ್ದಾರೆ.