ಪೆಟ್ರೋಲ್‌-ಡೀಸೆಲ್‌ ದರ ಏರಿಕೆ ವಿರೋಧಿಸಿ ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಸೆ.10ರಂದು ಭಾರತ್ ಬಂದ್ ಗೆ ಕರೆ ನೀಡಿವೆ. ಈ ನಿಟ್ಟಿನಲ್ಲಿ ಶಾಲಾ ಕಾಲೇಜುಗಳಿಗೆ ರಕೆ ಘೋಷಣೆ ಮಾಡಲಾಗಿಲ್ಲ. ಆದರೆ ಬಂದ್ ಬಿಸಿ ಗಮನಿಸಿ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ. 

ಬೆಂಗಳೂರು : ಪೆಟ್ರೋಲ್‌-ಡೀಸೆಲ್‌ ದರ ಏರಿಕೆ ವಿರೋಧಿಸಿ ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಸೆ.10ರಂದು ಭಾರತ್ ಬಂದ್ ಗೆ ಕರೆ ನೀಡಿವೆ. ಈ ನಿಟ್ಟಿನಲ್ಲಿ ಹಲವು ಸೇವೆಗಳು ವ್ಯತ್ಯಯವಾಗಲಿದೆ. 

ಇನ್ನು ಶಾಲಾ- ಕಾಲೇಜುಗಳಿಗೆ ರಜೆ ನೀಡಬೇಕೆ ಬೇಡವೆ ಎನ್ನುವ ಬಗ್ಗೆ ಶಾಲಾ ಆಡಳಿತ ಮಂಡಳಿ ಹಾಗೂ ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳ ನಿರ್ಧಾರಕ್ಕೆ ಬಿಟ್ಟಿರುವುದು ಎನ್ನಲಾಗಿದೆ.

ಖಾಸಗಿ ಶಾಲೆಗಳಿಗೆ ಇದೆಯಾ ರಜೆ..?

ಪದೇ ಪದೇ ಬಂದ್ ಮಾಡುವುದರಿಂದ ಮಕ್ಕಳ ಶಿಕ್ಷಣದ ಮೇಲೆ ಪರಿಣಾಮ ಬೀರಲಿದ್ದು, ಹಾಗಾಗಿ ಭಾರತ ಬಂದ್ ಗೆ ಖಾಸಗಿ ಶಾಲಾ ಕಾಲೇಜುಗಳಿಗೆ ರಜೆ ಇಲ್ಲ ಎಂದು ಖಾಸಗಿ ಶಾಲಾ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಶಶಿಕುಮಾರ್ ಹೇಳಿದ್ದಾರೆ. ಆದರೆ ಬಂದ್ ಬಿಸಿ ಹೆಚ್ಚಾಗಿರುವ ಕಡೆಯಲ್ಲಿ ರಜೆ ನೀಡಬೇಕೆ ಬೇಡವೇ ಎನ್ನುವುದನ್ನು ಮಾತ್ರ ಆಯಾ ಶಾಲಾ ಆಡಳಿತ ಮಂಡಳಿ ತೀರ್ಮಾನ ಮಾಡಲಿದೆ ಎಂದು ಹೇಳಿದ್ದಾರೆ. 

 ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ..?

ಜಿಲ್ಲೆಯಲ್ಲಿ ಶಾಲಾ - ಕಾಲೇಜುಗಳಿಗೆ ರಜೆ ನೀಡಬೇಕೆ ಬೇಡವೇ ಎನ್ನುವುದರ ಬಗ್ಗೆ ಅಧಿಕಾರಿಗಳು ಗೊಂದಲಕ್ಕೆ ಸಿಲುಕಿದ್ದು, ಈ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳು ನಿರ್ಧಾರ ಮಾಡಲಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.