ಬೆಂಗಳೂರು : ಕೇಂದ್ರ ಸರ್ಕಾರದ ನೀತಿಗಳನ್ನು ವಿರೋಧಿಸಿ, ಕಾರ್ಮಿಕರ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ (ಜೆಸಿಟಿ ಯು) ಜ.8 ಮತ್ತು 9ರಂದು ಕರೆ ನೀಡಿರುವ ‘ಭಾರತ್ ಬಂದ್’ನಿಂದಾಗಿ ರಾಜ್ಯದಲ್ಲೂ ಕೆಲ ಸೇವೆಗಳಲ್ಲಿ ವ್ಯತ್ಯಯವಾಗುವ ಸಾಧ್ಯತೆಯಿದೆ. 

ಬಂದ್ ಗೆ ಕೇವಲ ನೈತಿಕ ಬೆಂಬಲ ನೀಡುತ್ತೇವೆ. ಆದರೆ ಯಾವುದೇ ಪೆಟ್ರೋಲ್ ಬಂಕ್ ಗಳನ್ನೂ ಬಂದ್ ಮಾಡುವುದಿಲ್ಲ ಎಂದು ಪೆಟ್ರೋಲ್ ಬಂಕ್ ಅಸೋಸಿಯೇಷನ್ ಹೇಳಿದೆ. 

ನಾಳೆ ಭಾರತ್ ಬಂದ್ : ಶಾಲಾ-ಕಾಲೇಜುಗಳಿಗೆ ಇರುತ್ತಾ ರಜೆ..?

ದೇಶದಲ್ಲಿ 2 ದಿನಗಳ ಬಂದ್ ಇದ್ದರೂ ಎಲ್ಲಾ ಬಂಕ್ ಗಳಲ್ಲಿ ಪೆಟ್ರೋಲ್ ಲಭ್ಯವಾಗಲಿದೆ.  ಸಾರ್ವಜನಿಕರಿಗೆ ಅನಾನುಕೂಲ ಆಗಬಾರದು ಎಂದು ನೈತಿಕ ಬೆಂಬಲ ಮಾತ್ರ ನೀಡಲಾಗುತ್ತದೆ ಎಂದು ಪೆಟ್ರೋಲ್ ಬಂಕ್ ಅಸೋಸಿಯೇಷನ್ ಅಧ್ಯಕ್ಷ ರವಿ ಹೇಳಿದ್ದಾರೆ. 

ನಾಳೆ, ನಾಡಿದ್ದು ಭಾರತ್ ಬಂದ್ : ಏನಿರುತ್ತೆ..? ಏನಿರಲ್ಲ..?

ಪ್ರೈವೇಟ್ ವಾಹನಗಳಿಂದ ನೈತಿಕ ಬೆಂಬಲ : ಇನ್ನು ಭಾರತ್ ಬಂದ್ ಹಿನ್ನೆಲೆಯಲ್ಲಿ ಖಾಸಗಿ ಬಸ್ ಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ. ನೈತಿಕ ಬೆಂಬಲವಷ್ಟೇ ನೀಡಲಾಗುತ್ತದೆ. ಆದರೆ ಸಂಚಾರ ನಿಲ್ಲಿಸುವುದಿಲ್ಲ. ರಾಜ್ಯದೆಲ್ಲೆಡೆ ಖಾಸಗಿ ಬಸ್ ಗಳ ಸಂಚಾರ ಇರಲಿದೆ ಎಂದು ಸುವರ್ಣ ನ್ಯೂಸ್. ಕಾಂ ಗೆ  ಖಾಸಗಿ ಬಸ್ ಅಸೋಸಿಯೇಷನ್ ಅಧ್ಯಕ್ಷ ಸತ್ಯ ಹೇಳಿದ್ದಾರೆ.