ಎಸ್​ಸಿ, ಎಸ್​ಟಿ ದೌರ್ಜನ್ಯ ತಡೆ ಕಾಯ್ದೆ ದುರ್ಬಲಗೊಳಿಸಿರುವ ಸುಪ್ರೀಂಕೋರ್ಟ್​ ಆದೇಶ ಖಂಡಿಸಿ  ಇಂದು ದಲಿತ ಸಂಘಟನೆಗಳು ಭಾರತ್ ಬಂದ್’ಗೆ ಕರೆ ನೀಡಿದ್ದವು.  ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿದೆ. 

ನವದೆಹಲಿ (ಏ. 02): ಎಸ್​ಸಿ, ಎಸ್​ಟಿ ದೌರ್ಜನ್ಯ ತಡೆ ಕಾಯ್ದೆ ದುರ್ಬಲಗೊಳಿಸಿರುವ ಸುಪ್ರೀಂಕೋರ್ಟ್​ ಆದೇಶ ಖಂಡಿಸಿ ಇಂದು ದಲಿತ ಸಂಘಟನೆಗಳು ಭಾರತ್ ಬಂದ್’ಗೆ ಕರೆ ನೀಡಿದ್ದವು. ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಮಧ್ಯಪ್ರದೇಶದ ಮೊರೆನಾದಲ್ಲಿ ಒಬ್ಬರು ಮೃತಪಟ್ಟಿದ್ದಾರೆ. ಪ್ರತಿಭಟನೆಯ ಕಾವು ಹೆಚ್ಚಾಗಿದ್ದು ಗುಜರಾತ್, ಪಂಜಾಬ್, ಉತ್ತರ ಪ್ರದೇಶದಲ್ಲಿ 144 ಜಾರಿಗೊಳಿಸಲಾಗಿದೆ. 

ಉತ್ತರಪ್ರದೇಶ, ಮಧ್ಯಪ್ರದೇಶ, ರಾಜಸ್ತಾನ, ಪಂಜಾಬ್ ಸೇರಿದಂತೆ 7 ರಾಜ್ಯಗಳಲ್ಲಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದಿದ್ದು ಉದ್ವಿಘ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಮನೆ, ಕಾರುರು ಸಿಕ್ಕಸಿಕ್ಕ ಕಡೆ ಬೆಂಕಿ ಹಚ್ಚಲಾಗಿದೆ. ಪೊಲೀಸರು ಲಾಠಿ ಚಾರ್ಜ್​ ನಡೆಸಿದ್ರೂ ಪರಿಸ್ಥಿತಿ ಮಾತ್ರ ಹತೋಟಿಗೆ ಬಂದಿಲ್ಲ. ಬೀದಿಗಿಳಿದ ದಲಿತ ಸಂಘಟನೆಗಳು ಸುಪ್ರೀಂಕೋರ್ಟ್ ಆದೇಶ ವಾಪಸ್​ಗೆ ಪಟ್ಟು ಹಿಡಿದಿದ್ದಾರೆ.

ಎಸ್ಸಿ/ ಎಸ್ಟಿ ದೌರ್ಜನ್ಯ ಕಾಯ್ದೆಯನ್ನು ದುರುಪಯೋಗಪಡಿಸಿಕೊಳ್ಳುತ್ತಿರುವುದನ್ನು ತಡೆಗಟ್ಟಲು, ಆರೋಪಗಳು ಸುಳ್ಳಲ್ಲ ಎಂಬುದನ್ನು ಖಚಿತಪಡಿಸಿಕೊಳ್ಳುವುದಕ್ಕಾಗಿ ಪ್ರಾಥಮಿಕ ತನಿಖೆ ನಡೆಸಬೇಕು ಎಂದು ಸುಪ್ರೀಂ ಕೋರ್ಟ್ ಮಾ.20 ರಂದು ಆದೇಶ ನೀಡಿತ್ತು. ಈ ಆದೇಶವನ್ನು ದಲಿತ ಸಂಘಟನೆಗಳು ಪ್ರಶ್ನಿಸಿದ್ದು, ಭಾರತ್ ಬಂದ್ ಗೆ ಕರೆ ನೀಡಿವೆ.