ತುಮಕೂರು[ಜ.31] ಕೇಂದ್ರದಲ್ಲಿ ನಮಗೆ ಅಧಿಕಾರ ಸಿಕ್ಕರೆ ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿಗೆ ಅವರಿಗೆ ಭಾರತ ರತ್ನ ಪುರಸ್ಕಾರ ನೀಡಿ ಗೌರವಿಸುತ್ತೇವೆ ಎಂದು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಇಂದು ಸಿದ್ಧಗಂಗಾ ಮಠದಲ್ಲಿ ನಡೆದ ಶಿವಕುಮಾರ ಸ್ವಾಮಿಜೀಯ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿ, ಲೋಕಸಭೆ ಚುನಾವಣೆಯಲ್ಲಿ ನಮಗೆ ಅಧಿಕಾರ ಸಿಕ್ಕರೆ ಸಿದ್ಧಗಂಗಾ ಶ್ರೀಗಳಿಗೆ ಭಾರತ ರತ್ನ ಕೊಡಮಾಡಲು ಅಗತ್ಯ ಪ್ರಯತ್ನ ಮಾಡಲು ಸಾಧ್ಯವಾಗುತ್ತದೆ ಎಂದರು.

ಕಾಯಕ ಯೋಗಿ ಸಿದ್ದಗಂಗಾ ಶ್ರೀ ಜೊತೆ ಇರುತ್ತಿದ್ದ ಶ್ವಾನ ಕಣ್ಮರೆ

ಜನ ನಮಗೆ ಶಕ್ತಿ ಕೊಟ್ಟರೆ ನಾವೇ ಶ್ರೀಗಳಿಗೆ ಭಾರತ ರತ್ನ ಕೊಡಮಾಡಿಸಬಹುದು. ಶ್ರೀಗಳಿಗೆ ಭಾರತ ರತ್ನ ಪ್ರಶಸ್ತಿ ಕೊಟ್ಟು ಜನತೆ ಭಾವನೆಗೆ ಗೌರವ ಸಲ್ಲಿಸುತ್ತೇವೆ. ಆ ರೀತಿ ವಾತಾವರಣ ನಿರ್ಮಿಸಿ ಒಂದು ಅವಕಾಶ ಉಪಯೋಗ ಮಾಡೋಣ ಎಂದು ಕುಮಾರಸ್ವಾಮಿ ಹೇಳಿದ್ದಾರೆ.