ಬೆಂಗಳೂರು[ಜೂ.27] : ಭೂಮಿ ಒತ್ತುವರಿ ಮಾಡಿ ಗಣಿಗಾರಿಕೆ ಮಾಡಿದ ಪ್ರಕರಣದಿಂದ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದ ಡಿ.ಕೆ.ಸುರೇಶ್‌ ಅವರನ್ನು ಜನಪ್ರತಿನಿಧಗಳ ವಿಶೇಷ ನ್ಯಾಯಾಲಯ ಆರೋಪ ಮುಕ್ತಗೊಳಿಸಿದೆ. ಈ ಮೂಲಕ ಸುರೇಶ್‌ಗೆ ಬಿಗ್‌ ರಿಲೀಫ್‌ ಸಿಕ್ಕಿದೆ.

ಕನಕಪುರದ ಸಾತನೂರು ಬಳಿ ಅರಣ್ಯ ಭೂಮಿ ಒತ್ತುವರಿ ಮಾಡಿ ಗಣಿಗಾರಿಕೆ ಮಾಡಲಾಗಿದೆ ಎಂದು ಕನಕಪುರದ ವಿಭಾಗದ ಅರಣ್ಯ ಅಧಿಕಾರಿಗಳು ದೂರು ನೀಡಿದ್ದರು. 

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬುಧವಾರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಿಚಾರಣೆ ನಡೆಸಿ ಆರೋಪ ಮುಕ್ತಗೊಳಿಸಿ ಪ್ರಕರಣವನ್ನು ಮುಕ್ತಾಯಗೊಳಿಸಿದೆ.