ಕಾಂಗ್ರೆಸ್‌ ಪಕ್ಷದಲ್ಲಿ ಹಿರಿಯ ನಾಯಕರಿಗೆ ಯಾವುದೇ ಕಿಮ್ಮತ್ತಿಲ್ಲ. ನೋಡ್ತಾ ಇರಿ, ಕೆಲವೇ ದಿನಗಳಲ್ಲಿ ಆ ಪಕ್ಷಕ್ಕೆ ಮತ್ತೊಂದು ಶಾಕ್‌ ಕೊಡುತ್ತೇನೆ ಎಂದು ಹೇಳುವ ಮೂಲಕ ಕಾಂಗ್ರೆಸ್‌ನ ಉಚ್ಚಾಟಿತ ಅಫ್ಜಲ್‌ಪುರ ಶಾಸಕ ಮಾಲೀಕಯ್ಯ ಗುತ್ತೇದಾರ್‌ ಕುತೂ​ಹಲ ಮೂಡಿ​ಸಿ​ದ್ದಾ​ರೆ.

ಬೆಂಗಳೂರು : ಕಾಂಗ್ರೆಸ್‌ ಪಕ್ಷದಲ್ಲಿ ಹಿರಿಯ ನಾಯಕರಿಗೆ ಯಾವುದೇ ಕಿಮ್ಮತ್ತಿಲ್ಲ. ನೋಡ್ತಾ ಇರಿ, ಕೆಲವೇ ದಿನಗಳಲ್ಲಿ ಆ ಪಕ್ಷಕ್ಕೆ ಮತ್ತೊಂದು ಶಾಕ್‌ ಕೊಡುತ್ತೇನೆ ಎಂದು ಹೇಳುವ ಮೂಲಕ ಕಾಂಗ್ರೆಸ್‌ನ ಉಚ್ಚಾಟಿತ ಅಫ್ಜಲ್‌ಪುರ ಶಾಸಕ ಮಾಲೀಕಯ್ಯ ಗುತ್ತೇದಾರ್‌ ಕುತೂ​ಹಲ ಮೂಡಿ​ಸಿ​ದ್ದಾ​ರೆ.

ಡಾಲ​ರ್‍ಸ್ ಕಾಲೋನಿಯಲ್ಲಿರುವ ಬಿಜೆಪಿ ಅಗ್ರ ನಾಯಕ ಬಿ.ಎಸ್‌. ಯಡಿಯೂರಪ್ಪ ನಿವಾಸಕ್ಕೆ ಭೇಟಿ ನೀಡಿ ಹೊರಬಂದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮಾಲೀಕಯ್ಯ, ಏ.8ರಂದು ಅಫ್ಜಲ್‌ಪುರ ಕ್ಷೇತ್ರ ಮಾತ್ರವಲ್ಲ, ಹೈದರಾಬಾದ್‌ ಕರ್ನಾಟಕ ಭಾಗದ ಹಲವು ಕಾಂಗ್ರೆಸ್‌ ಮುಖಂಡರು ಬಿಜೆಪಿ ಸೇರಲಿದ್ದಾರೆ ಎಂದರು.

ಹಿರಿಯ ಕಾಂಗ್ರೆಸಿಗ ಮಲ್ಲಿಕಾರ್ಜುನ ಖರ್ಗೆ ಕುಟುಂಬದ ವಿರುದ್ಧ ವಾಗ್ದಾಳಿ ಮುಂದುವರೆಸಿದ ಗುತ್ತೇದಾರ್‌, ಖಗೆÜರ್‍ ಅವರ ಪುತ್ರ ವ್ಯಾಮೋಹವೇ ಕಾಂಗ್ರೆಸ್‌ ನಾಶಕ್ಕೆ ಕಾರಣವಾಗಲಿದೆ ಎಂದು ಕಿಡಿಕಾರಿದರು.

ತಮ್ಮ ಪುತ್ರನಿಗೆ ಹೇಗೆಲ್ಲ ಖರ್ಗೆ ಅವರು ಅಧಿಕಾರ ಕೊಡಿಸಿದ್ದಾರೆ ಎಂಬುದು ಜನರಿಗೆ ಗೊತ್ತಿದೆ. ಯಾರು ಯಾರನ್ನು ಸೋಲಿಸುತ್ತಾರೆ ಎಂಬುದು ಮತದಾರರು ನಿರ್ಧರಿಸುತ್ತಾರೆ. ಶೀಘ್ರದಲ್ಲೇ ಕಾಂಗ್ರೆಸ್‌ಗೆ ಮತ್ತೊಂದು ಶಾಕ್‌ ನೀಡುತ್ತೇನೆ. ಕೌರವರ ವಧೆಯಾಗಲಿದೆ ಎಂದು ಗುಡುಗಿದರು.

ಬಿಜೆಪಿ ರಾಷ್ಟಾ್ರಧ್ಯಕ್ಷ ಅಮಿತ್‌ ಶಾ ಅವರ ಸಮ್ಮುಖದಲ್ಲಿ ಅಫ್ಜಲ್‌ಪುರ ಸೇರಿದಂತೆ ಹೈದರಾಬಾದ್‌ ಕರ್ನಾಟಕ ಭಾಗದ ಹಲವು ಕಾಂಗ್ರೆಸ್‌ ಮುಖಂಡರು ಮತ್ತು ಕಾರ್ಯಕರ್ತರ ಜತೆ ಬಿಜೆಪಿ ಸೇರುತ್ತೇನೆ ಎಂದು ಹೇಳಿದರು.

ಇದೇ ವೇಳೆ ಸಕ್ರಿಯ ರಾಜಕಾರಣದಿಂದ ತಟಸ್ಥವಾಗಿರುವ ಮಾಜಿ ಸಚಿವ, ಚಲನಚಿತ್ರ ರಂಗದ ಹಿರಿಯ ನಟ ಅಂಬರೀಶ್‌ ಅವರ ರಾಜಕೀಯ ನಿರ್ಧಾರ ಬಗ್ಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದ ಗುತ್ತೇದಾರ್‌ ಅವರು, ಅಂಬರೀಶ್‌ ಸ್ವತಂತ್ರವಾಗಿ ತೀರ್ಮಾನ ತೆಗೆದುಕೊಳ್ಳಲು ಸಮರ್ಥರಿದ್ದಾರೆ ಎಂದು ಹೇಳಿದರು.