ಕೋಲಾರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ-75ರ ಮೆಟ್ಟುಬಂಡೆ ಗ್ರಾಮದ ಬಳಿ ಬೈಕ್​ಗೆ ಕಾರು ಡಿಕ್ಕಿ ಹೊಡೆದು  ಬೈಕ್​​ನಲ್ಲಿದ್ದ ದಂಪತಿ ಸ್ಥಳದಲ್ಲೇ ದುರ್ಮರಣ ಹೊಂದಿರುವ ಘಟನೆ ನಡೆದಿದೆ.

ಕೋಲಾರ (ಏ.02): ಕೋಲಾರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ-75ರ ಮೆಟ್ಟುಬಂಡೆ ಗ್ರಾಮದ ಬಳಿ ಬೈಕ್​ಗೆ ಕಾರು ಡಿಕ್ಕಿ ಹೊಡೆದು ಬೈಕ್​​ನಲ್ಲಿದ್ದ ದಂಪತಿ ಸ್ಥಳದಲ್ಲೇ ದುರ್ಮರಣ ಹೊಂದಿರುವ ಘಟನೆ ನಡೆದಿದೆ.

ತಮಿಳುನಾಡಿನ ಧರ್ಮಪುರಿಯ ನಿವಾಸಿಗಳಾದ ಮೋಹನ್ ಕುಮಾರ್ ಹಾಗೂ ಶಶಿಕಲಾ ಮೃತ ದುರ್ದೈವಿಗಳು.

ಕೋಲಾರ ಗ್ರಾಮಾಂತರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.