ರಾಜಸ್ಥಾನ, ಮಧ್ಯಪ್ರದೇಶ ಹಾಗೂ ಬಿಹಾರದಂತೆ ಉತ್ತರ ಪ್ರದೇಶವು ಅಭಿವೃದ್ಧಿ ಹೊಂದಬೇಕಾದರೆ ಅದು ಬಿಜೆಪಿಯಿಂದ ಮಾತ್ರ ಸಾಧ್ಯ, ಎಂದು ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡುತ್ತಾ ಶಾ ಹೇಳಿದ್ದಾರೆ.

ಲಕ್ನೋ(ಜ.28): ಸಮಾಜವಾದಿ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಉತ್ತರ ಪ್ರದೇಶಕ್ಕೆ ಅಂಟಿಕೊಂಡಿರುವ ‘ರೋಗಗ್ರಸ್ಥ’ ರಾಜ್ಯದ ಹಣೆಪಟ್ಟಿಯನ್ನು ತೊಡೆದು ಹಾಕಲು ಬಿಜೆಪಿಗೆ ಅಧಿಕಾರ ನೀಡುವಂತೆ ಮನವಿ ಮಾಡಿದ್ದಾರೆ.

ರಾಜಸ್ಥಾನ, ಮಧ್ಯಪ್ರದೇಶ ಹಾಗೂ ಬಿಹಾರದಂತೆ ಉತ್ತರ ಪ್ರದೇಶವು ಅಭಿವೃದ್ಧಿ ಹೊಂದಬೇಕಾದರೆ ಅದು ಬಿಜೆಪಿಯಿಂದ ಮಾತ್ರ ಸಾಧ್ಯ, ಎಂದು ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡುತ್ತಾ ಶಾ ಹೇಳಿದ್ದಾರೆ.

ತ್ರಿವಳಿ ತಲಾಕ್ ಬಗ್ಗೆ ಉತ್ತರ ಪ್ರದೇಶದ ಮುಸ್ಲಿಮ್ ಮಹಿಳೆಯರ ಅಭಿಪ್ರಾಯ ಸಂಗ್ರಹಿಸಲಾಗುವುದು, ಹಾಗೂ ಅದರ ಆಧಾರದಲ್ಲಿ ಸುಪ್ರೀಂ ಕೋರ್ಟ್’ನಲ್ಲಿ ವಾದ ಮಂಡಿಸಲಾಗುವುದೆಂದು ಶಾ ಹೇಳಿದ್ದಾರೆ.

ಬಿಜೆಪಿಯು ಅಧಿಕಾರಕ್ಕೆ ಬಂದರೆ ಉತ್ತರ ಪ್ರದೇಶದಲ್ಲಿ ಕಾರ್ಯಾಚರಿಸುತ್ತಿರುವ ಎಲ್ಲಾ ಅನಧಿಕೃತ ಕಸಾಯಿಖಾನೆಗಳನ್ನು ಮುಚ್ಚಲಾಗುವುದೆಂದು ಅಮಿತ್ ಶಾ ಹೇಳಿದ್ದಾರೆ.

ಜತೆಗೆ, ರಾಜ್ಯದಲ್ಲಿ ಬೃಹತ್ ಆಹಾರ ಸಂಸ್ಕರಣಾ ಘಟಕಗಳನ್ನು ಸ್ಥಾಪನೆ, ಕಾನೂನುಬಾಹಿರ ಗಣಿಗಾರಿಕೆಗೆ ತಡೆ, ಹಾಗೂ ಕೋಮುಗಲಭೆಗಳ ಸಂದರ್ಭದಲ್ಲಿ ಜನರು ವಲಸೆ ಹೋಗುವುದನ್ನು ತಡೆಯಲು ತಂಡಗಳನ್ನು ರಚಿಸಲಾಗುವುದೆಂದು ಶಾ ಹೇಳಿದ್ದಾರೆ.

ಪ್ರಣಾಳಿಕೆಯ ಮುಖ್ಯಾಂಶಗಳು:

  • ಪ್ರತಿ ಜಿಲ್ಲೆಯಲ್ಲಿ ಮೂರು ಮಹಿಳಾ ಪೊಲೀಸ್ ಠಾಣೆಗಳ ಸ್ಥಾಪನೆ
  • 24-ಗಂಟೆ ವಿದ್ಯುತ್
  • ಯುವಜನರಿಗೆ ಲ್ಯಾಪ್’ಟಾಪ್ ಹಾಗೂ ಅದರೊಂದಿಗೆ ಪ್ರತಿವರ್ಷ 1ಜಿಬಿ ಉಚಿತ ಇಂಟರ್ನೆಟ್
  • ರೈತರ ಸಾಲ ಮನ್ನಾ, ಹಾಗೂ ಶೂನ್ಯ ಬಡ್ಡಿದರದೊಂದಿಗೆ ಹೊಸಸಾಲ