ದೇಶದ ಅತ್ಯಂತ ಜನಪ್ರಿಯ ಇ-ಕಾಮರ್ಸ್ ಕಂಪನಿ ಫ್ಲಿಪ್‌ಕಾರ್ಟ್‌ನ ಸಹ ಸಂಸ್ಥಾಪಕ ಬಿನ್ನಿ ಬನ್ಸಲ್ ಅವರು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹುದ್ದೆಗೆ ಏಕಾಏಕಿ ರಾಜೀನಾಮೆ ನೀಡಲು ಸಹೋದ್ಯೋಗಿಯೊಂದಿಗೆ ಇದ್ದ ದೈಹಿಕ ಸಂಪರ್ಕವೇ ಕಾರಣ ಎಂದು ಹೇಳಲಾಗುತ್ತಿದೆ. 

ಬೆಂಗಳೂರು: ದೇಶದ ಅತ್ಯಂತ ಜನಪ್ರಿಯ ಇ-ಕಾಮರ್ಸ್ ಕಂಪನಿ ಫ್ಲಿಪ್‌ಕಾರ್ಟ್‌ನ ಸಹ ಸಂಸ್ಥಾಪಕ ಬಿನ್ನಿ ಬನ್ಸಲ್ ಅವರು ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಸಿಇಒ) ಹುದ್ದೆಗೆ ಮಂಗಳವಾರ ಏಕಾಏಕಿ ರಾಜೀನಾಮೆ ನೀಡಿದ್ದಕ್ಕೆ ಮಹಿಳೆ ಜತೆಗೆ ಹೊಂದಿದ್ದ ಅಕ್ರಮ ಸಂಬಂಧ ಕಾರಣ ಎಂದು ಹೇಳಲಾಗುತ್ತಿದೆ.

ಫ್ಲಿಪ್‌ಕಾರ್ಟ್‌ನ ಮಾಜಿ ಉದ್ಯೋಗಿಯೊಬ್ಬರ ಜತೆ ಬಿನ್ನಿ ಬನ್ಸಲ್ ಸಮ್ಮತಿಯ ಲೈಂಗಿಕ ಸಂಬಂಧ ಹೊಂದಿದ್ದರು. ಆದರೆ ಆ ಮಹಿಳೆ ಕಳೆದ ಜುಲೈನಲ್ಲಿ ಲೈಂಗಿಕ ಹಿಂಸೆಯ ಆರೋಪ ಮಾಡಿದ್ದರು. ಈ ಬಗ್ಗೆ ಕಂಪನಿ ತನಿಖೆಗೆ ಆದೇಶಿಸಿತ್ತು. ಇಬ್ಬರೂ ಸಮ್ಮತಿಯ ಲೈಂಗಿಕ ಸಂಬಂಧ ಹೊಂದಿದ್ದರು ಎಂಬುದು ತನಿಖೆ ವೇಳೆ ಗೊತ್ತಾಗಿತ್ತು. 

ಆದರೆ ಈ ವಿಚಾರಕ್ಕೆ ಸಂಬಂಧಿಸಿದಂತೆ ಪಾರದರ್ಶಕತೆ ಕಾಯ್ದುಕೊಳ್ಳದಿರುವುದು ಸೇರಿದಂತೆ ಕೆಲವೊಂದು ತಪ್ಪು ನಿರ್ಧಾರಗಳನ್ನು ಬಿನ್ನಿ ಕೈಗೊಂಡಿದ್ದರು ಎಂದು ಹೇಳಲಾಗಿದೆ.

ಅನುಚಿತ ವರ್ತನೆ ಆರೋಪ; ಫ್ಲಿಪ್‌ಕಾರ್ಟ್ ಸಿಇಓ ರಾಜೀನಾಮೆ