Asianet Suvarna News Asianet Suvarna News

ಕೊನೆಗೂ ಬಿಷಪ್ ಫ್ರಾಂಕೊ ಮುಲಕ್ಕಲ್ ಬಂಧನ!

ಕ್ರೈಸ್ತ ಸನ್ಯಾಸಿನಿ ಮೇಲೆ ಅತ್ಯಾಚಾರ ಎಸಗಿದ ಆರೋಪ! ಕೊನೆಗೂ ಬಿಷಪ್ ಫ್ರಾಂಕೊ ಮುಲಕ್ಕಲ್ ಬಂಧನ! ಅತ್ಯಾಚಾರ ಆರೋಪದ ಮೇಲೆ ಜೈಲು ಸೇರಿದ ಮೊದಲ ಬಿಷಪ್! ನಿನ್ನೆಯಷ್ಟೇ ಬಿಷಪ್ ಹುದ್ದೆಯಿಂದ ಮುಲಕ್ಕಲ್ ವಜಾಗೊಳಿಸಿದ್ದ ವ್ಯಾಟಿಕನ್

Bishop Franco Mulakkal arrested in Kochi
Author
Bengaluru, First Published Sep 21, 2018, 8:00 PM IST
  • Facebook
  • Twitter
  • Whatsapp

ಕೊಚ್ಚಿ(ಸೆ.21): ಕೇರಳದ ಕ್ರೈಸ್ತ ಸನ್ಯಾಸಿನಿ ಮೇಲೆ ಅತ್ಯಾಚಾರ ಎಸಗಿದ ಆರೋಪ ಎದುರಿಸುತ್ತಿರುವ ಜಲಂಧರ್ ನ ರೋಮನ್ ಕ್ಯಾಥೋಲಿಕ್ ಬಿಷಪ್ ಫ್ರಾಂಕೊ ಮುಲಕ್ಕಲ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. 

ಇದರೊಂದಿಗೆ ನನ್ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಬಂಧನಕ್ಕೊಳಗಾದ ಮೊದಲ ಕ್ಯಾಥೋಲಿಕ್ ಬಿಷಪ್ ಎಂಬ ಕುಖ್ಯಾತಿಗೆ  ಬಿಷಪ್ ಫ್ರಾಂಕೊ ಮುಲಕ್ಕಲ್ ಪಾತ್ರರಾಗಿದ್ದಾರೆ. ಪೊಲೀಸ್ ವಿಚಾರಣೆ ವೇಳೆ ಬಿಷಪ್ ಕೆಲವು ಅಸಮಂಜಸ ಹೇಳಿಕೆಗಳನ್ನು ನೀಡಿದ ಹಿನ್ನೆಲೆಯಲ್ಲಿ ಪೊಲೀಸರು ಅವರನ್ನು ಬಂಧಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ನಿನ್ನೆಯಷ್ಟೇ ವ್ಯಾಟಿಕನ್ ಪೋಪ್, ಫ್ರಾಂಕೊ ಮುಲಕ್ಕಲ್ ಅವರನ್ನು ಜಲಂಧರ್ ನ ರೋಮನ್ ಕ್ಯಾಥೋಲಿಕ್ ಬಿಷಪ್ ಹುದ್ದೆಯಿಂದ ತಾತ್ಕಾಲಿಕವಾಗಿ ತೆರವುಗೊಳಿಸಿದ್ದರು. ಮುಲಕ್ಕಲ್ 2014ರಿಂದ 2016ರ ಅವಧಿಯಲ್ಲಿ 44 ವರ್ಷದ ಕ್ರೈಸ್ತ ಸನ್ಯಾಸಿನಿ ಮೇಲೆ ಪದೇ ಪದೇ ಅತ್ಯಾಚಾರ ಎಸಗಿದ ಆರೋಪ ಎದುರಿಸುತ್ತಿದ್ದಾರೆ.

Follow Us:
Download App:
  • android
  • ios