ಬಿಜೆಪಿ ಕಾರ್ಯಕರ್ತ ದೀಪಕ್ ಹತ್ಯೆ ಪ್ರಕರಣದ ನಾಲ್ವರು ಆರೋಪಿಗಳನ್ನು ಮೂಡಬಿದರೆ ಬಳಿ ಮಿಜಾರು ಬಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮಂಗಳೂರು (ಜ.03): ಬಿಜೆಪಿ ಕಾರ್ಯಕರ್ತ ದೀಪಕ್ ಹತ್ಯೆ ಪ್ರಕರಣದ ನಾಲ್ವರು ಆರೋಪಿಗಳನ್ನು ಮೂಡಬಿದರೆ ಬಳಿ ಮಿಜಾರು ಬಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಆರೋಪಿಗಳನ್ನು ಬೆನ್ನಟ್ಟಿದ ಪೊಲೀಸರು ಸಿನಿಮೀಯ ರೀತಿಯಲ್ಲಿ ಕಾರನ್ನು ಚೇಸ್ ಮಾಡಿದ್ದಾರೆ. ಆರೋಪಿಗಳಿದ್ದ ಕಾರಿನ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ​​​ ಕಾರಿನ ಮೇಲೆ 2 ಸುತ್ತು ಗುಂಡಿನ ದಾಳಿ ನಡೆಸಿದ್ದು ಘಟನೆಯಲ್ಲಿ ಒಬ್ಬನ ಕಾಲಿಗೆ ಗುಂಡು ತಗುಲಿ ಗಾಯವಾಗಿದೆ.

ಕಾರಿನಲ್ಲಿದ್ದ ನಾಲ್ವರನ್ನು ಮೂಡಬಿದರೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಾಲ್ವರನ್ನು ಮಂಗಳೂರಿಗೆ ಕರೆ ತರುತ್ತಿದ್ದಾರೆ.