ಶಬರಿ ಸಂಘರ್ಷಕ್ಕೆ ಬಿಜೆಪಿ ಕಾರ್ಯಕರ್ತ ಬಲಿ
Jan 3, 2019, 11:53 AM IST
ಶಬರಿಮಲೆಗೆ ಮಹಿಳೆಯರ ಪ್ರವೇಶದ ಬೆನ್ನಲ್ಲೇ ಕೇರಳದಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ. ಸಿಪಿಎಂ-ಬಿಜೆಪಿ ಕಾರ್ಯಕರ್ತರ ಘರ್ಷಣೆಯಲ್ಲಿ ಬಿಜೆಪಿ ಕಾರ್ಯಕರ್ತನೊಬ್ಬ ಬಲಿಯಾಗಿದ್ದಾನೆ. ನಿನ್ನೆ ರಾತ್ರಿ ಪದನಮ್ ತಿಟ್ಟ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಎರಡೂ ಗುಂಪುಗಳ ನಡುವೆ ನಡೆದ ಕಲ್ಲು ತೂರಾಟದಲ್ಲಿ ಬಿಜೆಪಿ ಕಾರ್ಯಕರ್ತ ಚಂದ್ರನ್ ಉನ್ನಿತ್ತಾನ್ ಸಾವನ್ನಪ್ಪಿದ್ದಾರೆ.