ಇವತ್ತು ಹಾಡಹಗಲೇ ಮಂಗಳೂರು ಹೊರವಲಯದ ಕೃಷ್ಣಾಪುರ ಎಂಬಲ್ಲಿ ಬಿಜೆಪಿ ಕಾರ್ಯಕರ್ತ ದೀಪಕ್ ರಾವ್ ಎಂಬುವವರ ಹತ್ಯೆ ನಡೆದಿದೆ. ಸ್ವಿಫ್ಟ್ ಕಾರಿನಲ್ಲಿ ಬಂದ ದುಷ್ಕರ್ಮಿಗಳ ತಂಡ ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಿದ್ದಾರೆ.
ಮಂಗಳೂರು (ಜ.03): ಇವತ್ತು ಹಾಡಹಗಲೇ ಮಂಗಳೂರು ಹೊರವಲಯದ ಕೃಷ್ಣಾಪುರ ಎಂಬಲ್ಲಿ ಬಿಜೆಪಿ ಕಾರ್ಯಕರ್ತ ದೀಪಕ್ ರಾವ್ ಎಂಬುವವರ ಹತ್ಯೆ ನಡೆದಿದೆ. ಸ್ವಿಫ್ಟ್ ಕಾರಿನಲ್ಲಿ ಬಂದ ದುಷ್ಕರ್ಮಿಗಳ ತಂಡ ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಿದ್ದಾರೆ.
ದೀಪಕ್ ರಾವ್ ಹತ್ಯೆ ಖಂಡಿಸಿ ಹಿಂದೂ ಸಂಘಟನೆ ಮತ್ತು ಬಿಜೆಪಿ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹತ್ಯೆಗೈದ ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಎಜೆ ಆಸ್ಪತ್ರೆಗೆ ಮುತ್ತಿಗೆ ಹಾಕಿ ಕಮಿಷನರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಇವತ್ತು ಹಾಡಹಗಲೇ ಬಿಜೆಪಿ ಕಾರ್ಯಕರ್ತನ ಕೊಲೆಯಾಗಿದೆ. ಸರ್ಕಾರದ ತುಷ್ಠಿಕರಣದಿಂದ ಅಮಾಯಕ ಹಿಂದೂ ಯುವಕನ ಹತ್ಯೆಯಾಗಿದೆ. ರಾಜ್ಯ ಸರ್ಕಾರ ಮತ್ತು ಜಿಲ್ಲಾಡಳಿತ ಕಣ್ಣುಮುಚ್ಚಿ ಕೂತಿದೆ. ಈ ಪ್ರಕರಣದ ತನಿಖೆಯನ್ನು ಎನ್'ಐಎಗೆ ವಹಿಸಬೇಕು. ರಾಜ್ಯ ಸರ್ಕಾರದ ತನಿಖೆಯಲ್ಲಿ ನಂಬಿಕೆಯಿಲ್ಲ. ಈ ಕೊಲೆ ಹಿಂದೆ ಭಯೋತ್ಪಾದನೆ ಸಂಘಟನೆಗಳ ಶಂಕೆಯಿದೆ. ದೀಪಕ್ ಕುಟುಂಬಕ್ಕೆ 50 ಲಕ್ಷ ಕೂಡಲೇ ಪರಿಹಾರ ನೀಡಬೇಕು ಎಂದು ದೆಹಲಿಯಲ್ಲಿ ಮಂಗಳೂರು ಸಂಸದ ನಳೀನ್ ಕುಮಾರ್ ಕಟೀಲ್ ಆಗ್ರಹಿಸಿದ್ದಾರೆ.
