ಬೊಮ್ಮನಹಳ್ಳಿ ಶಾಸಕ ಸತೀಶ್ ರೆಡ್ಡಿ ನೇತೃತ್ವದಲ್ಲಿ ಬನ್ನೇರುಘಟ್ಟ ಮುಖ್ಯ ರಸ್ತೆ ಅಗಲೀಕರಣಗೋಳಿಸುವಂತೆ ಒತ್ತಾಯಿಸಿ ನೂರಾರು ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ ನಡೆಯುತ್ತಿದೆ.

ಬೆಂಗಳೂರು(ಆ.19): ಬೊಮ್ಮನಹಳ್ಳಿ ಶಾಸಕ ಸತೀಶ್ ರೆಡ್ಡಿ ನೇತೃತ್ವದಲ್ಲಿ ಬನ್ನೇರುಘಟ್ಟ ಮುಖ್ಯ ರಸ್ತೆ ಅಗಲೀಕರಣಗೋಳಿಸುವಂತೆ ಒತ್ತಾಯಿಸಿ ನೂರಾರು ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ ನಡೆಯುತ್ತಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಬೆಂಗಳೂರು ಡೈರಿಯಿಂದ ನೈಸ್ ರಸ್ತೆಯವರೆಗೂ ಅಗಲೀಕರಣ ಮಾಡುವಂತೆ ಒತ್ತಾಯಿಸುವುದರೊಂದಿಗೆ, ಅರಕೆರೆ ಕೆರೆ ಅಭಿವೃದ್ಧಿಪಡಿಸುವಂತೆ ಬನ್ನೇರುಘಟ್ಟ ಮುಖ್ಯರಸ್ತೆಯ ಅರಕೆರೆ ಜಂಕ್ಷನ್'ನಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ. ನಡೆಸುತ್ತಿಸಿದ್ದಾರೆ. ರಾಜ್ಯ ಸರ್ಕಾರದ ವಿರುದ್ದ ದಿಕ್ಕಾರ ಕೂಗಿ ಕಾರ್ಯಕರ್ತರು ಅಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಬನ್ನೇರುಘಟ್ಟ ಮುಖ್ಯರಸ್ತೆಯಲ್ಲಿ ವಾಹನಗಳನ್ನು ತಡೆದು ಪ್ರತಿಭಟನೆ ಹಿನ್ನೆಲೆ ಕಿ.ಮೀ ಗಟ್ಟಲೆ ಟ್ರಾಪಿಕ್ ಜಾಮ್ ಆಗಿದ್ದು, ಈ ನಡುವೆ ಮಹಿಳಾ ವಾಹನ ಸವಾರರೊಬ್ಬರು ಟ್ರಾಫಿಕ್ ಪೊಲೀಸರ ನಡುವೆ ಮಾತಿನ ಚಕಮಕಿಯೂ ನಡೆದಿದೆ.