ಮಂಡ್ಯ ಲೋಕಸಭೆ ಉಪಚುನಾವಣೆಗೆ ಬಿಜೆಪಿಯಿಂದ ಅಚ್ಚರಿ ಹೆಸರು ತೇಲಿಬಂದಿದೆ.

ಬೆಂಗಳೂರು, [ಅ.11]: ರಾಜ್ಯದಲ್ಲಿ ಎದುರಾಗಿರುವ ಮೂರು ಲೋಕಸಬಾ ಹಾಗೂ ಎರಡು ವಿಧಾನಸಭಾ ಉಪಚುನಾವಣೆಗೆ ಮೂರು ಪಕ್ಷಗಳು ಭರ್ಜರಿ ತಯಾರಿ ನಡೆಸಿವೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಅದರಲ್ಲಿ ಮಂಡ್ಯ ಲೋಕಸಭೆ ಉಪಚುನಾವಣೆ ತೀವ್ರ ಕುತೂಹಲ ಮೂಡಿಸಿದೆ. ಜೆಡಿಎಸ್ ಹಾಗೂ ಕಾಂಗ್ರೆಸ್ ಮೈತ್ರಿ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತಿದ್ದರೆ, ಜೆಡಿಎಸ್ ಭದ್ರಕೋಟೆಯಲ್ಲಿ ಬಿಜೆಪಿ ಏಕಾಂಗಿಯಾಗಿ ಸ್ಪರ್ಧೆ ಮಾಡಲಿದೆ.

ಇನ್ನು ಬಿಜೆಪಿಯಿಂದ ಅಚ್ಚರಿ ಹೆಸರೊಂದು ತೇಲಿಬಂದಿದೆ. ಬಿಜೆಪಿ ಅಭ್ಯರ್ಥಿಯಾಗಿ‌‌ ಮಾಜಿ ವಿಧಾನಪರಿಷತ್ ಸದಸ್ಯ ಅಶ್ವತ್ ನಾರಾಯಣ್ ಗೌಡ ಅವರನ್ನು ಕಣಕ್ಕಿಳಿಸಲು ಬಿಜೆಪಿ ಮುಂದಾಗಿದೆ. ಅಶ್ವತ್ ನಾರಾಯಣ್ ಅವರು ಮೂಲತಃ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಮಾಚನಹಳ್ಳಿ ಗ್ರಾಮದವರಾಗಿದ್ದರಿಂದ ಜೆಡಿಎಸ್ ಗೆ ಬಿಗ್ ಫೈಟ್ ಕೊಡಬಹುದು ಎಬುವುದು ಬಿಜೆಪಿಯ ಪ್ಲಾನ್.

ಈ ಹಿಂದೆ ಮಾಜಿ ಡಿಸಿಎಂ ಆರ್.ಅಶೋಕ್ ಹೆಸರು ಕೇಳಿ ಬಂದಿತ್ತು. ಆದ್ರೆ, ಅಶೋಕ್ ಹೊರಗಿನವರಾಗಿರೋದ್ರಿಂದ ವರ್ಕೌಟ್ ಆಗುವುದಿಲ್ಲ ಎನ್ನುವುದು ಬಿಜೆಪಿ ನಾಯಕರ ಲೆಕ್ಕಾಚಾರವಾಗಿದೆ. ಈ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯವರೇ ಆದ ಹಾಲಿ ಬಿಜೆಪಿ ವಕ್ತಾರರಾಗಿರುವ ಅಶ್ವತ್ ನಾರಾಯಣ ಅವರನ್ನು ಅಂತಿಮಗೊಳಿಸಲು ಬಿಜೆಪಿ ನಿರ್ಧರಿಸಿದ್ದು, ಇಂದು ಅಧಿಕೃತ ಘೋಷಣೆ ಸಾಧ್ಯತೆ ಇದೆ.