ಬಿಬಿಎಂಪಿ ಪಾಲಿಕೆ ಸದಸ್ಯ ಉಮೇಶ್ ಶೆಟ್ಟಿ ಮೊದಲೇ ವೇದಿಕೆ ಏರಿದ್ದಕ್ಕೆ ಕಾಂಗ್ರೆಸ್ ಕಾರ್ಯಕರ್ತರು ತಗಾದೆ ತೆಗೆದಿದ್ದಾರೆ. ಉಮೇಶ್ ಶೆಟ್ಟಿಯನ್ನು ವೇದಿಕೆಯಿಂದ ಕೆಳಗಿಳಿಸುವಂತೆ ಶಾಸಕ ಪ್ರಿಯಾಕೃಷ್ಣ ಅವರ ಬೆಂಬಲಿಗರು ಪಟ್ಟು ಹಿಡಿದಿದ್ದಾರೆ. ಈ ವೇಳೆ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ಮಧ್ಯೆ ಜಟಾಪಟಿ ನಡೆದಿದೆ.
ಬೆಂಗಳೂರು(ಜುಲೈ 22): ಕಾರ್ಯಕ್ರಮದಲ್ಲಿ ವೇದಿಕೆ ಏರುವ ವಿಚಾರಕ್ಕೆ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದೆ. ಬೆಂಗಳೂರಿನ ಮಾಗಡಿ ರಸ್ತೆ ಕೆಳಸೇತುವೆ ಉದ್ಘಾಟನೆ ವೇಳೆ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಮಾತಿನ ಸಮರ ನಡೆದಿದೆ. ಬಿಬಿಎಂಪಿ ಪಾಲಿಕೆ ಸದಸ್ಯ ಉಮೇಶ್ ಶೆಟ್ಟಿ ಮೊದಲೇ ವೇದಿಕೆ ಏರಿದ್ದಕ್ಕೆ ಕಾಂಗ್ರೆಸ್ ಕಾರ್ಯಕರ್ತರು ತಗಾದೆ ತೆಗೆದಿದ್ದಾರೆ. ಉಮೇಶ್ ಶೆಟ್ಟಿಯನ್ನು ವೇದಿಕೆಯಿಂದ ಕೆಳಗಿಳಿಸುವಂತೆ ಶಾಸಕ ಪ್ರಿಯಾಕೃಷ್ಣ ಅವರ ಬೆಂಬಲಿಗರು ಪಟ್ಟು ಹಿಡಿದಿದ್ದಾರೆ. ಈ ವೇಳೆ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ಮಧ್ಯೆ ಜಟಾಪಟಿ ನಡೆದಿದೆ.
ಮಾಗಡಿ ರಸ್ತೆ ಕೆಳ ಸೇತುವೆ ವಿಚಾರದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ರಾಜಕೀಯ ಮಾಡುತ್ತಿದ್ದು, ಅಂಡರ್'ಪಾಸ್'ಗೆ ನಾಡಪ್ರಭು ಕೆಂಪೇಗೌಡ ಅಂತ ಬಿಜೆಪಿ ಹೆಸರಿಟ್ಟಿರುವುದು ಕಾಂಗ್ರೆಸ್ ಕಾರ್ಯಕರ್ತರ ಅಸಮಾಧಾನಕ್ಕೆ ಕಾರಣವಾಗಿದೆ ಎನ್ನಲಾಗಿದೆ.
(ಫೋಟೋ: ಕೆ. ಉಮೇಶ್ ಶೆಟ್ಟಿಯವರದ್ದು)
