ತೀವ್ರ ಕುತೂಹಲ ಕೆರಳಿಸಿದ್ದ ಬಿಜೆಪಿ ಟಿಕೆಟ್ ಘೋಷಣೆಗೆ ಕೊನೆಗೂ ತೆರೆಬಿದ್ದಿದ್ದು, ರಾಜೀವ್ ಚಂದ್ರಶೇಖರ್ ಅವರಿಗೆ ಬಿಜೆಪಿ  ಟಿಕೆಟ್ ನೀಡಿದೆ.

ಬೆಂಗಳೂರು(ಮಾ.11): ಹಾಲಿ ಸಂಸದ ರಾಜೀವ್ ಚಂದ್ರಶೇಖರ್ ಅವರು ಮುಂಬರುವ ರಾಜ್ಯಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ.

ತೀವ್ರ ಕುತೂಹಲ ಕೆರಳಿಸಿದ್ದ ಬಿಜೆಪಿ ಟಿಕೆಟ್ ಘೋಷಣೆಗೆ ಕೊನೆಗೂ ತೆರೆಬಿದ್ದಿದ್ದು, ರಾಜೀವ್ ಚಂದ್ರಶೇಖರ್ ಅವರಿಗೆ ಬಿಜೆಪಿ ಟಿಕೆಟ್ ನೀಡಿದೆ.

ಕಳೆದ ಎರಡು ಬಾರಿ ಪಕ್ಷೇತರರಾಗಿ ಸಂಸದರಾಗಿದ್ದ ರಾಜೀವ್ ಚಂದ್ರಶೇಖರ್'ಗೆ ಈ ಬಾರಿ ಬಿಜೆಪಿ ಹೈಕಮಾಂಡ್ ಟಿಕೆಟ್ ಘೋಷಿಸಿದೆ. ನಾಮಪತ್ರ ಸಲ್ಲಿಸಲು ಸೋಮವಾರ ಕಡೆಯ ದಿನವಾಗಿದ್ದು, ಮಾರ್ಚ್ 23ರಂದು ಚುನಾವಣೆ ನಡೆಯಲಿದೆ.