ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರು ಚಂದ್ರಶೇಖರ್ ಅವರಿಗೆ  ಬಿ ಫಾರ್ಮ್ ನೀಡಿದ್ದಾರೆ. ಸ್ಥಳೀಯ ಮುಖಂಡ ರುದ್ರೇಶ್ ಒಮ್ಮತದ ಮೇರೆಗೆ ಚಂದ್ರಶೇಖರ್ ಅವರಿಗೆ ಟಿಕೆಟ್ ನೀಡಲಾಗಿದೆ.  ಸೋಮವಾರ ಚಂದ್ರಶೇಖರ್ ನಾಮಪತ್ರ ಸಲ್ಲಿಸಲಿದ್ದಾರೆ. 

ಬೆಂಗಳೂರು[ಅ.13]: ರಾಮನಗರ ಲೋಕಸಭೆ ಉಪ ಚುನಾವಣೆಗೆ ಬಿಜೆಪಿಯಿಂದ ಕಾಂಗ್ರೆಸಿನ ಹಿರಿಯ ಮುಖಂಡ, ವಿಧಾನ ಪರಿಷತ್ ಸದಸ್ಯ ಸಿ.ಎಂ.ಲಿಂಗಪ್ಪ ಅವರ ಪುತ್ರ ಚಂದ್ರಶೇಖರ್ ಅವರಿಗೆ ಟಿಕೆಟ್ ನೀಡಲಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರು ಚಂದ್ರಶೇಖರ್ ಅವರಿಗೆ ಬಿ ಫಾರ್ಮ್ ನೀಡಿದ್ದಾರೆ. ಸ್ಥಳೀಯ ಮುಖಂಡ ರುದ್ರೇಶ್ ಒಮ್ಮತದ ಮೇರೆಗೆ ಚಂದ್ರಶೇಖರ್ ಅವರಿಗೆ ಟಿಕೆಟ್ ನೀಡಲಾಗಿದೆ. ಸೋಮವಾರ ಚಂದ್ರಶೇಖರ್ ನಾಮಪತ್ರ ಸಲ್ಲಿಸಲಿದ್ದಾರೆ. 

ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಜೆಡಿಎಸ್ ಅಭ್ಯರ್ಥಿ ಫಿಕ್ಸ್

ರಾಮನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕಣಕ್ಕಿಳಿಸದ ಕಾರಣ ಸಿ.ಎಂ. ಲಿಂಗಪ್ಪ ಪಕ್ದ ವಿರುದ್ಧ ಬಹಿರಂಗವಾಗಿಯೇ ಮುನಿಸಿಕೊಂಡಿದ್ದಾರೆ. ಅಲ್ಲದೆ ತಾವು ಪ್ರಚಾರಕ್ಕೆ ಹೋಗುವುದಿಲ್ಲ ಎಂದು ಬಂಡಾಯವೆದ್ದಿರುವುದರಿಂದ ಪಕ್ಷ ಶಿಸ್ತು ಕ್ರಮ ಜರುಗಿಸುವ ಸಾಧ್ಯತೆಯಿದೆ. ಸಮ್ಮಿಶ್ರ ಸರ್ಕಾರದ ಪರವಾಗಿ ಜೆಡಿಎಸ್'ನಿಂದ ಅನಿತಾ ಕುಮಾರಸ್ವಾಮಿ ಸ್ಪರ್ಧಿಸಲಿದ್ದು, ಅವರೂ ಕೂಡ ಸೋಮವಾರ ಉಮೇದುವಾರಿಕೆ ಸಲ್ಲಿಸಲಿದ್ದಾರೆ.

ಜೆಡಿಎಸ್ ಅಭ್ಯರ್ಥಿಗೆ ದೇವೇಗೌಡರಿಂದ ಗ್ರೀನ್ ಸಿಗ್ನಲ್