ಲೋಕಸಭೆ ಚುನಾವಣೆಗೆ ಸ್ಪರ್ಧೆ ಮಾಡದ ಹಿನ್ನೆಲೆ| ಉಮಾ ಭಾರತಿ ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷೆಯಾಗಿ ನೇಮಕ| ಕೇಂದ್ರ ಸಚಿವ ಜೆಪಿ ನಡ್ಡಾ ಮಾಹಿತಿ| ಚುನಾವಣಾ ರಾಜಕೀಯದಿಂದ ದೂರ ಸರಿದ ಬಿಜೆಪಿ ಫೈರ್ ಬ್ರಾಂಡ್ ನಾಯಕಿ|
ನವದೆಹಲಿ(ಮಾ.24): ಮಹತ್ವದ ಬೆಳವಣಿಗೆಯೊಂದರಲ್ಲಿ ಕೇಂದ್ರ ಸಚಿವೆ ಉಮಾ ಭಾರತಿ ಅವರನ್ನು ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷೆಯನ್ನಾಗಿ ನೇಮಕ ಮಾಡಲಾಗಿದೆ.
ಈ ಕುರಿತು ಮಾಹಿತಿ ನೀಡಿರುವ ಕೇಂದ್ರ ಸಚಿವ ಜೆಪಿ ನಡ್ಡಾ, ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡದ ಹಿನ್ನೆಲೆಯಲ್ಲಿ ಉಮಾ ಭಾರತಿ ಅವರನ್ನು ರಾಷ್ಟ್ರೀಯ ಉಪಾಧ್ಯಕ್ಷೆಯಾಗಿ ನೇಮಕ ಮಾಡಲಾಗಿದೆ ಎಂದು ತಿಳಿಸಿದರು.
ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ತಾವು ಸ್ಪರ್ಧೆ ಮಾಡುವುದಿಲ್ಲ ಎಂದು ಸ್ವತಃ ಉಮಾ ಭಾರತಿಯವರೇ ಪಕ್ಷದ ವರಿಷ್ಠರಿಗೆ ತಿಳಿಸಿದ್ದರು.
ರಾಮ ಮಂದಿರ ನಿರ್ಮಾಣ ಹೋರಾಟ ಮತ್ತು ಗಂಗಾ ಶುದ್ಧೀಕರಣ ಅಭಿಯಾನದಲ್ಲಿ ತೊಡಗಿಸಿಕೊಳ್ಳುವುದಾಗಿ ಉಮಾ ಭಾರತಿ ಸ್ಪಷ್ಟಪಡಿಸಿದ್ದರು.
