ಇನ್ನು ಮತ್ತೋರ್ವ ಕಾಂಗ್ರೆಸ್ ಮುಖಂಡ ಹಾಗೂ ಗುಜರಾತ್ ಉಸ್ತುವಾರಿ ಅಶೋಕ್ ಗೆಹ್ಲೋಟ್, 'ಅಯ್ಯರ್ ಹೇಳಿಕೆ ದುರದೃಷ್ಟಕರವಾಗಿದ್ದು, ನಾನಿದನ್ನು ಒಪ್ಪುವುದಿಲ್ಲ' ಎಂದು ಹೇಳಿದ್ದಾರೆ.

ನವದೆಹಲಿ(ಡಿ.07): ಪ್ರಧಾನಿ ನರೇಂದ್ರ ಮೋದಿ ಒಬ್ಬ ಕೀಳು ಮಟ್ಟದ ರಾಜಕಾರಣಿ, ನೀಚ ಎಂಬ ಮಣಿಶಂಕರ್ ಅಯ್ಯರ್ ಹೇಳಿಕೆಗೆ ಸ್ವಪಕ್ಷದಿಂದಲೇ ತೀವ್ರ ವಿರೋಧ ವ್ಯಕ್ತವಾಗಿದೆ.

ಕಾಂಗ್ರೆಸ್ ಹಿರಿಯ ಮುಖಂಡ ಅಯ್ಯರ್ ಹೇಳಿಕೆ ಸಾಕಷ್ಟು ಚರ್ಚೆಗೆ ಗ್ರಾಸವಾಗುತ್ತಿದ್ದಂತೆ ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿ ತಕ್ಷಣ ಪ್ರತಿಕ್ರಿಯೆ ನೀಡಿದ್ದು, ಕಾಂಗ್ರೆಸ್'ಗೆ ತನ್ನದೇ ಆದ ಸಂಸ್ಕೃತಿ ಮತ್ತು ಪರಂಪರೆಯಿದೆ. ಪ್ರಧಾನಿ ನರೇಂದ್ರ ಮೋದಿಯನ್ನು ಉದ್ದೇಶಿಸಿ ಅಯ್ಯರ್ ಬಳಸಿದ ಭಾಷೆಯನ್ನು ನಾನು ಒಪ್ಪುವುದಿಲ್ಲ. ಮೋದಿ ಬಗ್ಗೆ ಬಳಸಿದ ಭಾಷೆಗೆ ಅಯ್ಯರ್ ಕ್ಷಮೆ ಕೋರಬೇಕೆಂದು ಬಯಸುತ್ತೇನೆಂದು ಹೇಳಿದ್ದಾರೆ.

Scroll to load tweet…

ಇನ್ನು ಮತ್ತೋರ್ವ ಕಾಂಗ್ರೆಸ್ ಮುಖಂಡ ಹಾಗೂ ಗುಜರಾತ್ ಉಸ್ತುವಾರಿ ಅಶೋಕ್ ಗೆಹ್ಲೋಟ್, 'ಅಯ್ಯರ್ ಹೇಳಿಕೆ ದುರದೃಷ್ಟಕರವಾಗಿದ್ದು, ನಾನಿದನ್ನು ಒಪ್ಪುವುದಿಲ್ಲ' ಎಂದು ಹೇಳಿದ್ದಾರೆ.

Scroll to load tweet…