ಫೈನಲ್ ಆಯ್ತು ಬಿಜೆಪಿ ಅಭ್ಯರ್ಥಿಗಳ ಪಟ್ಟಿ : ಯಾರ್ಯಾರಿಗೆ ದೊರಕಿದೆ ಟಿಕೆಟ್..?

news | Thursday, March 29th, 2018
Suvarna Web Desk
Highlights

ವಿಧಾನಸಭಾ ಚುನಾವಣೆ ಘೋಷಣೆಯಾದ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಸದ್ಯಕ್ಕೆ ಒಟ್ಟು 224 ಕ್ಷೇತ್ರಗಳ ಪೈಕಿ 90ಕ್ಕೆ ಅಭ್ಯರ್ಥಿಗಳ ಹೆಸರು ಅಂತಿಮಗೊಳಿಸಿ ಮೊದಲ ಹಂತದ ಪಟ್ಟಿ ಸಿದ್ಧಪಡಿಸಿದೆ.

ಬೆಂಗಳೂರು : ವಿಧಾನಸಭಾ ಚುನಾವಣೆ ಘೋಷಣೆಯಾದ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಸದ್ಯಕ್ಕೆ ಒಟ್ಟು 224 ಕ್ಷೇತ್ರಗಳ ಪೈಕಿ 90ಕ್ಕೆ ಅಭ್ಯರ್ಥಿಗಳ ಹೆಸರು ಅಂತಿಮಗೊಳಿಸಿ ಮೊದಲ ಹಂತದ ಪಟ್ಟಿ ಸಿದ್ಧಪಡಿಸಿದೆ.

125 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಆಯ್ಕೆ ಅಂತಿಮಗೊಂಡ ನಂತರ ಬರುವ ಏಪ್ರಿಲ್ ಮೊದಲ ವಾರದಲ್ಲಿ ಅಭ್ಯರ್ಥಿಗಳ ಪ್ರಥಮ ಹಂತದ ಪಟ್ಟಿಯನ್ನು ಅಧಿಕೃತವಾಗಿ ಬಿಡುಗಡೆ ಗೊಳಿಸುವ ಉದ್ದೇಶ ಹೊಂದಲಾಗಿದೆ. ಈ ಸಂಖ್ಯೆ ತುಸು ಹೆಚ್ಚೂ ಕಡಿಮೆಯೂ ಆಗಬಹುದು ಎಂದು ಮೂಲಗಳು ತಿಳಿಸಿವೆ.

ಇದುವರೆಗೆ ಅಂತಿಮಗೊಳಿಸಿರುವ ಕ್ಷೇತ್ರಗ ಳಲ್ಲಿ ಹಾಲಿ ಶಾಸಕರು ಪ್ರತಿನಿಧಿಸುವ ಕ್ಷೇತ್ರಗಳೂ ಸೇರಿವೆ. ಸದ್ಯದ ಪರಿಸ್ಥಿತಿಯಲ್ಲಿ ಎಲ್ಲ ಹಾಲಿ ಶಾಸಕರಿಗೂ ಟಿಕೆಟ್ ನೀಡುವ ಬಗ್ಗೆ ವರಿಷ್ಠರು ತೀರ್ಮಾನ ಕೈಗೊಂಡಿದ್ದಾರೆ. ಆದರೆ, ಶಾಸಕ ಬಿ.ವೈ.ರಾಘವೇಂದ್ರ ಬದಲು ಅವರ ತಂದೆ ಬಿ.ಎಸ್. ಯಡಿಯೂರಪ್ಪ ಅವರಿಗೆ ಟಿಕೆಟ್ ಲಭಿಸಲಿದೆ. ವಿರಾಜಪೇಟೆ ಶಾಸಕ ಕೆ.ಜಿ.ಬೋಪಯ್ಯ ಅವರಿಗೆ ಟಿಕೆಟ್ ತಪ್ಪಬಹುದು ಎಂಬ ವದಂತಿ ಹಬ್ಬಿದ್ದರೂ ಆ ಬಗ್ಗೆ ಇನ್ನೂ ಅಂತಿಮ ನಿರ್ಧಾರ ಕೈಗೊಂಡಿಲ್ಲ. ಬೋಪಯ್ಯ ಅವರು ಸ್ಥಳೀಯ ಮಟ್ಟದಲ್ಲಿ ಸಂಘ ಪರಿವಾರದ ಮುಖಂಡರೊಂದಿಗೆ ಭಿನ್ನಾ ಭಿಪ್ರಾಯ ವ್ಯಕ್ತವಾಗಿರುವುದರಿಂದ ಟಿಕೆಟ್ ನೀ ಡುವ ಬಗ್ಗೆ ಅನುಮಾನ ವ್ಯಕ್ತವಾಗಿದೆ.

ಹೊಸಮುಖಕ್ಕೆ ಅವಕಾಶ ಕೊಡಿ ಎಂಬ ಸಲಹೆಯನ್ನೂ ಸಂಘ ಪರಿವಾರದ ಮುಖಂಡರು ನೀಡಿದ್ದಾರೆ ಎನ್ನಲಾಗಿದೆ. ಆದರೆ, ಹಿರಿಯ ಮುಖಂಡರಾಗಿರುವ ಬೋಪಯ್ಯ ಅವರನ್ನು ಕೈಬಿಟ್ಟು ಬೇರೊಬ್ಬರಿಗೆ ಟಿಕೆಟ್ ನೀಡಿದಲ್ಲಿ ಅದು ಅನಗತ್ಯ ಗೊಂದಲಕ್ಕೆ ಕಾರಣವಾಗಬಹುದು ಎಂಬ ಅಭಿಪ್ರಾಯವೂ ಪಕ್ಷದ ಹಿರಿಯ ನಾಯಕರಲ್ಲಿದೆ. ಹೀಗಾಗಿ, ಬೋಪಯ್ಯ ಅವರಿಗೂ ಟಿಕೆಟ್ ನೀಡುವ ಸಾಧ್ಯತೆಯೇ ಹೆಚ್ಚು ಎಂಬ ಮಾತು ಪಕ್ಷದ ನಾಯಕರಿಂದ ಕೇಳಿಬಂದಿದೆ. ಇನ್ನುಳಿದಂತೆ ಕಳೆದ ಬಾರಿ ಕಡಿಮೆ ಮತಗಳ ಅಂತರದಲ್ಲಿ ಸೋಲು ಅನುಭವಿಸಿದ ಅಭ್ಯರ್ಥಿಗಳಿಗೂ ಟಿಕೆಟ್ ಲಭಿಸಲಿದೆ.

ಕೆಲವು ಕ್ಷೇತ್ರಗಳಲ್ಲಿ ಕಳೆದ ಬಾರಿ ಕೆಜೆಪಿಯಿಂದ ಸ್ಪರ್ಧಿಸಿ ಹೆಚ್ಚು ಮತ ಗಳಿಸಿದವರನ್ನೂ ಪರಿಗಣಿಸಲು ನಿರ್ಧರಿಸಲಾಗಿದೆ. ಮೊದಲ ಪಟ್ಟಿಯಲ್ಲೇ ಇತರ ಪಕ್ಷಗಳಿಂದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ವಲಸೆ ಬಂದವರಿಗೂ ಟಿಕೆಟ್ ಘೋಷಿಸುವ ಸಾಧ್ಯತೆ ಹೆಚ್ಚಿದೆ ಎಂದು ಮೂಲಗಳು ತಿಳಿಸಿವೆ. ಜಾತಿ ಸಮೀಕರಣ, ರಾಜಕೀಯ ಲೆಕ್ಕಾಚಾರ, ಪಕ್ಷ ನಿಷ್ಠೆ ಜತೆಗೆ ಪಕ್ಷ ನಡೆಸಿ ಆಂತರಿಕ ಸಮೀಕ್ಷಾ ಅಂಶಗಳನ್ನು ಮುಂದಿಟ್ಟುಕೊಂಡು ಮೊದಲ ಹಂತದ ಅಭ್ಯರ್ಥಿಗಳ ಪಟ್ಟಿ ಸಿದ್ಧಪಡಿಸಲಾಗಿದೆ.

ಒಂದಕ್ಕಿಂತ ಹೆಚ್ಚು ಆಕಾಂಕ್ಷಿಗಳಿರುವ ಹಾಗೂ ಸಮರ್ಥ ಅಭ್ಯರ್ಥಿಗಳ ಕೊರತೆ ಎದುರಿಸುತ್ತಿರುವ ಕ್ಷೇತ್ರಗಳನ್ನು ಎರಡನೇ ಹಂತದಲ್ಲಿ ಪ್ರಕಟಿಸುವ ಸಾಧ್ಯತೆಯಿದೆ. ಶೀಘ್ರ ಅಮಿತ್ ಶಾ ಜತೆ ಸಮಾಲೋಚನೆ: ಪಕ್ಷದ ಅಧ್ಯಕ್ಷ ಅಮಿತ್ ಶಾ ಶುಕ್ರವಾರದಿಂದ ಸುಮಾರು ಐದು ದಿನಗಳ ಕಾಲ ರಾಜ್ಯದಲ್ಲಿ ಪ್ರವಾಸ ಕೈಗೊಳ್ಳುತ್ತಿದ್ದಾರೆ. ಇದೇ ವೇಳೆ ರಾಜ್ಯ ನಾಯಕರು ಅವರೊಂದಿಗೆ ಸಮಾಲೋಚನೆ ನಡೆಸಿದ ನಂತರ ಮೊದಲ ಹಂತದ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸುವ ಸಾಧ್ಯತೆಯಿದೆ.

Comments 0
Add Comment

  Related Posts

  India Today Karnataka PrePoll Part 6

  video | Friday, April 13th, 2018

  India Today Karnataka PrePoll 2018 Part 7

  video | Friday, April 13th, 2018

  India Today Karnataka Prepoll 2018

  video | Friday, April 13th, 2018

  India Today Karnataka PrePoll Part 6

  video | Friday, April 13th, 2018
  Suvarna Web Desk