ಮತ್ತೆ ಬಿಜೆಪಿ ಅಧಿಕಾರದತ್ತ | 2 ತಿಂಗಳಲ್ಲಿ ಬಿಜೆಪಿ ಸರ್ಕಾರ ರಚನೆ | ಬಿಜೆಪಿ ಮುಖಂಡ ಆರ್ ಅಶೋಕ್ ಬಾಂಬ್ 

ಬೆಂಗಳೂರು (ಅ. 12): ಮುಂದಿನ ಒಂದೆರಡು ತಿಂಗಳಲ್ಲಿ ಬಿಜೆಪಿ ಸರ್ಕಾರ ರಚನೆ ಮಾಡಲಿದೆ ಎಂದು ಬಿಜೆಪಿ ನಾಯಕ ಆರ್.ಅಶೋಕ್ ಮತ್ತೆ ಬಾಂಬ್ ಸಿಡಿಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಕಾಂಗ್ರೆಸ್ ಹಾಗೂ ಜೆಡಿಎಸ್‌ನಲ್ಲಿ ಅಸಮಾಧಾನಗೊಂಡಿರುವ ಶಾಸಕರೊಂದಿಗೆ ಸಂಪರ್ಕದಲ್ಲಿದ್ದೇವೆ ಎಂದು ಹೇಳಿದರು. ಸರ್ಕಾರ ರಚನೆ ಮಾಡುವುದು ಗುರಿಯೋ? ಕನಸೋ? ಅದೇನೇ ಇರಲಿ, ಒಟ್ಟಿನಲ್ಲಿ ಬಿಜೆಪಿ ಸರ್ಕಾರ ರಚನೆಯಾಗುವುದು ಖಚಿತ. ಮುಂದಿನ ಒಂದೆರಡು ತಿಂಗಳಲ್ಲಿ ಸರ್ಕಾರ ಬರಲಿದೆ.

ನಮಗೂ ಆಸೆ ಇದ್ದು, ನಾವೇನು ಸನ್ಯಾಸಿಗಳಲ್ಲ. ಯಾವುದೇ ಆಪರೇಷನ್ ಮಾಡಿಲ್ಲ. ಆದರೆ, ಲೋಕಸಭಾ ಚುನಾವಣೆ ವೇಳಗೆ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ ಎಂದರು. ಕೆಲ ದಿನಗಳ ಹಿಂದೆ ಆಪರೇಶನ್ ಕಮಲ ನಡೆಯುತ್ತಿದೆ ಎಂಬ ಸುದ್ದಿ ಹಬ್ಬಿತ್ತು. ಸ್ವತಃ ಸಿಎಂ ಕುಮಾರಸ್ವಾಮಿಯವರೇ ಆಪರೇಶನ್ ಕಮಲದ ಬಗ್ಗೆ ಹೇಳಿಕೆ ನೀಡಿದ್ದರು.