ಬೆಂಗಳೂರು: ಎರಡು ವರ್ಷಗಳ ಹಿಂದೆಯೇ ಪುಲ್ವಾಮಾ ಉಗ್ರರ ದಾಳಿ ಕುರಿತು ಮಾಹಿತಿ ಗೊತ್ತಿದ್ದರೂ ಉದ್ದೇಶ ಪೂರ್ವಕವಾಗಿ ಮುಚ್ಚಿಟ್ಟು ಸೈನಿಕರು ಬಲಿಯಾಗಲು ಪರೋಕ್ಷವಾಗಿ ಕಾರಣರಾಗಿದ್ದಾರೆ ಎಂದು ಆರೋಪಿಸಿ ಮುಖ್ಯಮಂತ್ರಿಗಳ ವಿರುದ್ಧ ವಿಧಾನಸೌಧ ಠಾಣೆಗೆ ಬಿಜೆಪಿ ಎಸ್‌ಸಿ ಮೋರ್ಚಾ ಶುಕ್ರವಾರ ದೂರು ನೀಡಿದೆ. 

ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ಫೆ. 14 ರಂದು ನಡೆದ ಭಯೋತ್ಪಾದಕರ ಆತ್ಮಾಹುತಿ ದಾಳಿಯಿಂದ 45 ವೀರಯೋ ಧರು ಸಾವನ್ನಪ್ಪಿದ್ದರು.

ಆದರೆ ಈ ಘಟನೆ ಬಗ್ಗೆ ಏ.5 ರಂದು ಚಿಕ್ಕಮಗಳೂರು ಜಿಲ್ಲೆ ಕೊಪ್ಪದಲ್ಲಿ ನಡೆದ ಬಹಿರಂಗ ಸಭೆಯಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರ ಸ್ವಾಮಿ ಅಸಂಬದ್ಧವಾಗಿ ಹೇಳಿಕೆ ನೀಡಿದ್ದಾರೆ ಎಂದು ಬಿಜೆಪಿ ಎಸ್‌ಸಿ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಚಿ.ನಾ. ರಾಮು ಹೇಳಿದ್ದಾರೆ.