ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಎನ್‌ಡಿಎ ಸರ್ಕಾರ ಮೂರು ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸಾಧನಾ ಸಮಾವೇಶಗಳನ್ನು ಹಮ್ಮಿಕೊಳ್ಳುವ ಮೂಲಕ ಜನರಿಗೆ ಕೇಂದ್ರ ಸರ್ಕಾರದ ಕಾರ್ಯಕ್ರಮಗಳನ್ನು ಹೇಗೆ ತಲುಪಿಸಬೇಕು ಎಂಬುದರ ಬಗ್ಗೆ ಕೋರ್‌ ಕಮಿಟಿ ಸದಸ್ಯರು ಚರ್ಚಿಸಿ ರೂಪರೇಷೆ ಸಿದ್ಧಪಡಿಸುವ ಸಂಭವವಿದೆ ಎಂದು ಮೂಲಗಳು ತಿಳಿಸಿವೆ.

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಚುನಾವಣೆಯ ಕಾವು ಏರತೊಡಗಿದ ಬೆನ್ನಲ್ಲೇ ಮುಂದಿನ ಕಾರ್ಯತಂತ್ರ ರೂಪಿಸುವ ಉದ್ದೇಶದಿಂದ ಭಾನುವಾರ ಬಿಜೆಪಿ ಕೋರ್‌ ಕಮಿಟಿ ಸಭೆ ನಡೆಯಲಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಒಂದೂವರೆ ತಿಂಗಳ ಅವಧಿಯ ಪಕ್ಷದ ‘ಜನಸಂ​ಪರ್ಕ ಅಭಿಯಾನ' ನಡೆಯು​ತ್ತಿರುವ ನಡುವೆಯೇ ಈ ಕೋರ್‌ ಕಮಿಟಿ ಸಭೆ ಕರೆದಿರುವುದು ಸಹಜವಾಗಿಯೇ ಕುತೂಹಲ ಮೂಡಿಸಿದೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಎನ್‌ಡಿಎ ಸರ್ಕಾರ ಮೂರು ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸಾಧನಾ ಸಮಾವೇಶಗಳನ್ನು ಹಮ್ಮಿಕೊಳ್ಳುವ ಮೂಲಕ ಜನರಿಗೆ ಕೇಂದ್ರ ಸರ್ಕಾರದ ಕಾರ್ಯಕ್ರಮಗಳನ್ನು ಹೇಗೆ ತಲುಪಿಸಬೇಕು ಎಂಬುದರ ಬಗ್ಗೆ ಕೋರ್‌ ಕಮಿಟಿ ಸದಸ್ಯರು ಚರ್ಚಿಸಿ ರೂಪರೇಷೆ ಸಿದ್ಧಪಡಿಸುವ ಸಂಭವವಿದೆ ಎಂದು ಮೂಲಗಳು ತಿಳಿಸಿವೆ.

ಜತೆಗೆ ಪ್ರಸಕ್ತ ಜನಸಂಪರ್ಕ ಅಭಿಯಾನದಲ್ಲಿ ಜಿಲ್ಲಾವಾರು ಹೆಚ್ಚು ಹೆಚ್ಚು ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸುವಂತೆ ಮಾಡುವ ಮೂಲಕ ಪಕ್ಷದ ಸಂಘಟನೆ ಬಲಪಡಿಸುವ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಯಲಿದೆ ಎಂದು ಹೇಳಲಾಗಿದೆ.