Asianet Suvarna News Asianet Suvarna News

ಬೆಂಗಳೂರು: ಹಾಡುಹಗಲೇ ಬಿಜೆಪಿ ಕಾರ್ಪೋರೇಟರ್ ಪತಿಯ ಹತ್ಯೆ

ನಗರವನ್ನೇ ಬೆಚ್ಚಿಬೀಳಿಸುವ ಘಟನೆ ನಡೆದಿದೆ, ಬಿಬಿಎಂಪಿ ಬಿಜೆಪಿ ಕಾರ್ಪೋರೇಟರ್ ಪತಿಯ ಬರ್ಬರ ಹತ್ಯೆ ನಡೆದಿದೆ.

BJP Corporators Husband Murdered in Broad Daylight

ಬೆಂಗಳೂರು: ನಗರವನ್ನೇ ಬೆಚ್ಚಿಬೀಳಿಸುವ ಘಟನೆ ನಡೆದಿದೆ, ಬಿಬಿಎಂಪಿ ಬಿಜೆಪಿ ಕಾರ್ಪೋರೇಟರ್ ಪತಿಯ ಬರ್ಬರ ಹತ್ಯೆ ನಡೆದಿದೆ.

ವಾರ್ಡ್ ನಂಬರ್ 138 ಛಲವಾದಿ ಪಾಳ್ಯರ  ಕಾರ್ಪೋರೇಟರ್​ ರೇಖಾ ಪತಿ ಕದಿರೇಶನ್’ನನ್ನು ದುಷ್ಕರ್ಮಿಗಳು ಹಾಡುಹಗಲೇ ಕೊಚ್ಚಿ ಹತ್ಯೆ ಮಾಡಿದ್ದಾರೆ.

ಸಂಜೆ 4 ಗಂಟೆ ವೇಳೆಗೆ ಕಾಟನ್​ಪೇಟೆಯ ಅಂಜಿನಪ್ಪ ಗಾರ್ಡನ್​​ನಲ್ಲಿ ಕದಿರೇಶ್​ ಹತ್ಯೆ ನಡೆದಿದೆ. ಹಳೆ ದ್ವೇಷದ ಹಿನ್ನೆಲೆಯಲ್ಲಿ ಬೆಕ್ಕಿನ ಕಣ್ಣು ರಾಜೇಂದ್ರ ಸಹಚರರಿಂದ ಕೊಲೆ ನಡೆದಿದೆ ಎಂದು ಶಂಕಿಸಲಾಗಿದೆ.

ಮೃತ ಕದಿರೇಶ್ ಕಾಟನ್​ಪೇಟೆಯಲ್ಲಿ 2002ರಲ್ಲೇ ರೌಡಿ ಶೀಟರ್ ಖಾತೆ ತೆರೆದಿದ್ದ. ಕದಿರೇಶ್​​ ವಿರುದ್ಧ ಹಲವಾರು ಶ್ರೀರಾಂಪುರ, ಕಾಟನ್​ಪೇಟೆ’ಗಳಲ್ಲಿ ಕೇಸ್’ಗಳು ದಾಖಲಾಗಿತ್ತು. ಒಟ್ಟು 15 ಪ್ರಕರಣಗಳಲ್ಲಿ ಕದಿರೇಶ್ ಆರೋಪಿಯಾಗಿದ್ದ ಎಂದು ಹೇಳಲಾಗಿದೆ.

ಕದಿರೇಶ್ ವಿರುದ್ಧದ 5 ಪ್ರಕರಣಗಳು ಖುಲಾಸೆಯಾಗಿದ್ದು, ಇನ್ನೂ 10 ಪ್ರಕರಣಗಳ ವಿಚಾರಣೆ ನಡೆಯುತ್ತಿತ್ತು. ಕದಿರೇಶ್​​ ವಿರುದ್ಧ ಕೊಲೆ, ಕೊಲೆಯತ್ನ. ಹಲ್ಲೆ ಬೆದರಿಕೆ ದೂರುಗಳಿತ್ತು.

Follow Us:
Download App:
  • android
  • ios