ಮಂಗಳವಾರ ದುಷ್ಕರ್ಮಿಗಳ ಗುಂಡಿಗೆ ಬಲಿಯಾದ ಹಿರಿಯ ಪತ್ರಕರ್ತೆ ಹಾಗೂ ವಿಚಾರವಾದಿ ಗೌರಿ ಲಂಕೇಶ್ ಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಬಿಜೆಪಿ ಆಗ್ರಹಿಸಿದೆ. ಗೌರಿ ಲಂಕೇಶ್ ಹತ್ಯೆ ಪ್ರಕರಣವನ್ನು ಕರ್ನಾಟಕ ಸರ್ಕಾರ ಸಿಬಿಐಗೆ ಹಸ್ತಾಂತರಿಸಬೇಕು ಎಂದು ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ಒತ್ತಾಯಿಸಿದ್ದಾರೆ.
ನವದೆಹಲಿ: ಮಂಗಳವಾರ ದುಷ್ಕರ್ಮಿಗಳ ಗುಂಡಿಗೆ ಬಲಿಯಾದ ಹಿರಿಯ ಪತ್ರಕರ್ತೆ ಹಾಗೂ ವಿಚಾರವಾದಿ ಗೌರಿ ಲಂಕೇಶ್ ಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಬಿಜೆಪಿ ಆಗ್ರಹಿಸಿದೆ.
ಗೌರಿ ಲಂಕೇಶ್ ಹತ್ಯೆ ಪ್ರಕರಣವನ್ನು ಕರ್ನಾಟಕ ಸರ್ಕಾರ ಸಿಬಿಐಗೆ ಹಸ್ತಾಂತರಿಸಬೇಕು ಎಂದು ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ಒತ್ತಾಯಿಸಿದ್ದಾರೆ.
ಬಲಪಂಥೀಯ ವಿಚಾರಧಾರೆಯ ಕಟು ವಿಮರ್ಶಕರಾಗಿದ್ದ ಗೌರಿ ಲಂಕೇಶ್ ಅವರನ್ನು ನಿನ್ನೆ ಸಂಜೆ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಗೈದಿದ್ದಾರೆ.
ಇಂದು ಮರಣೋತ್ತರ ಪರೀಕ್ಷೆ ನಡೆದಿದ್ದು, 3 ಗುಂಡುಗಳು ಗೌರಿ ಎದೆಯನ್ನು ಹೊಕ್ಕಿವೆ ಎಂದು ತಿಳಿದು ಬಂದಿದೆ.
ಗೌರಿ ಹತ್ಯೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ದೇಶಾದ್ಯಂತ ಪ್ರತಿಭಟನೆಗಳು ನಡೆಯುತ್ತಿವೆ. ಬೆಂಗಳೂರು ಪೊಲೀಸರು ವಿಶೇಷ ತಂಡಗಳನ್ನು ರಚಿಸಿ ತನಿಖೆಯನ್ನು ನಡೆಸುತ್ತಿದ್ದಾರೆ. ದುಷ್ಕರ್ಮಿಗಳನ್ನು ಹಿಡಿಯಲು ಬಲೆ ಬೀಸಿದ್ದಾರೆ.
